ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿನ ಅನಧಿಕೃತ ಬಡಾವಣೆಗಳ ನಿಯಂತ್ರಣಕ್ಕೆ ಜುಲೈ ವೇಳೆಗೆ ಕಾಯ್ದೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ 1.99 ಕೋಟಿ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಇಂತಹ ಸಾಧನೆ ಮಾಡಿದ ಪ್ರಥಮ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇ-ಸ್ವತ್ತಿನಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ವಾಟ್ಸ್ಆ್ಯಪ್ ಚಾಟ್ಬಾಟ್ ಮೂಲಕವೇ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗಿದೆ. ತೆರಿಗೆ ಪಾವತಿಯಲ್ಲೂ ಪ್ರಗತಿಯಾಗಿದ್ದು, ₹1,273.34 ಕೋಟಿ ತೆರಿಗೆ ಸಂಗ್ರಹವಾಗಿದೆ ಎಂದರು.

ಪಂಚಾಯಿತಿ ವಿಕೇಂದ್ರೀಕರಣ ಕುರಿತು ದೇಶದ ಎಲ್ಲಾ ರಾಜ್ಯಗಳಲ್ಲಿ ನಡೆಸಿರುವ ಅಧ್ಯಯನ ವರದಿಯನ್ನು ಕೇಂದ್ರ ಪಂಚಾಯತ್ ರಾಜ್ ಸಚಿವಾಲಯ ಬಿಡುಗಡೆಗೊಳಿಸಿದ್ದು, ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ. ಪಂಚಾಯತ್ ಸಬಲೀಕರಣ, ಆರ್ಥಿಕ ಸ್ವಾಯತ್ತತೆ ಮತ್ತು ಆಡಳಿತ ಸುಧಾರಣೆಗಳ ಕುರಿತು ರಾಜ್ಯಗಳನ್ನು ಮೌಲ್ಯಮಾಪನ ಮಾಡುವ ಪಿಡಿಐ ಚೌಕಟ್ಟು, ಕಾರ್ಯಗಳು, ಹಣಕಾಸು, ಕಾರ್ಯನಿರ್ವಾಹಕರು, ಸಾಮರ್ಥ್ಯ ವೃದ್ಧಿ ಮತ್ತು ಹೊಣೆಗಾರಿಕೆ ಸೇರಿದಂತೆ ಆರು ಪ್ರಮುಖ ಅಂಶಗಳನ್ನು ಆಧರಿಸಿ ಮೌಲ್ಯಮಾಪನ ಮಾಡಲಾಗಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ತ್ಯಾಜ್ಯ ನಿರ್ವಹಣೆಯನ್ನು ಮಹಿಳೆಯರೇ ನಿರ್ವಹಿಸುತ್ತಿದ್ದಾರೆ. 5,910 ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಿಗೆ ತರಬೇತಿ ನೀಡಲಾಗಿದೆ. ಈ ಒಕ್ಕೂಟಗಳಲ್ಲಿ 12,211 ಮಹಿಳೆಯರು ಸದಸ್ಯರಾಗಿದ್ದು, ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿಕೊಂಡಿದ್ದಾರೆ. 3,469 ಮಹಿಳಾ ಚಾಲಕಿಯರು ತ್ಯಾಜ್ಯ ವಾಹನಗಳನ್ನು ಚಾಲನೆ ಮಾಡುತ್ತಿದ್ದಾರೆ. ಉದ್ಯೋಗ ಖಾತ್ರಿ ಮೂಲಕ 55 ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ 5,895 ಅರಿವು ಕೇಂದ್ರಗಳಿದ್ದು, 5,770 ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಪಂಚಾಯತಿ ಗ್ರಂಥಾಲಯಗಳಲ್ಲಿ 50.62 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಳಕ್ಕೆ ಅರಿವು ಕೇಂದ್ರಗಳು ನೆರವಾಗುತ್ತಿವೆ. ಹಲವು ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ತೇರ್ಗಡೆಯಾಗಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.