ನವದೆಹಲಿ: ‘ಮುಂದಿನ ವರ್ಷ ನಡೆಯಲಿರುವ ಕರ್ನಾಟಕದ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಾಲ್ಗೊಳ್ಳಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷಕ್ಕೆ ಬಲ ನೀಡುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಚಾರದಲ್ಲಿ ಭಾಗವಹಿಸುವಂತೆ ಇತ್ತೀಚೆಗೆ ಉದಯಪುರದಲ್ಲಿ ನಡೆದ ಚಿಂತನ ಶಿಬಿರದಲ್ಲಿ ಪಕ್ಷದ ರಾಜ್ಯ ಮುಖಂಡರ ನಿಯೋಗ ಮನವಿ ಸಲ್ಲಿಸಿದೆ. ಅವರು ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಅವರು ಹೇಳಿದರು.

‘ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡುವ ಪಕ್ಷದ ಅಭ್ಯರ್ಥಿಯನ್ನು ವರಿಷ್ಠರೇ ಅಂತಿಮಗೊಳಿಸಲಿದ್ದಾರೆ’ ಎಂದ ಅವರು, ‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನಮ್ಮ ನಡುವೆ ಹಗ್ಗ–ಜಗ್ಗಾಟ ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.