ಬಿಎಸ್‌ವೈ ಜನ್ಮದಿನ: ಫೆ.27ರಂದು ಕಾರ್ಯಕ್ರಮ
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಜನ್ಮ ದಿನಾಚರಣೆಯನ್ನು ಫೆ.27ರಂದು ದಾವಣಗೆರೆಯಲ್ಲಿ ಅದ್ದೂರಿಯಾಗಿ ಆಯೋಜಿಸಲು ಈ ಸಭೆಯಲ್ಲಿ ನಿರ್ಣಯಿಸಲಾಯಿತು. ‘ಪಕ್ಷವನ್ನು ಕಟ್ಟಿ ಬೆಳಸಿದ ಯಡಿಯೂರಪ್ಪ ಚುನಾವಣಾ ಕಣದಿಂದ ಮಾತ್ರ ಹಿಂದೆ ಸರಿದಿದ್ದಾರೆ. ರಾಜಕಾರಣದಲ್ಲಿ ಇನ್ನೂ ಸಕ್ರಿಯರಾಗಿದ್ದಾರೆ. ಅವರ ಜನ್ಮದಿನದಂದು 20 ಲಕ್ಷ ಜನರನ್ನು ಸೇರಿಸಿ ಶಕ್ತಿ ಪ್ರದರ್ಶಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗುವುದು’ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಸುದ್ದಿಗಾರರಿಗೆ ಮಾಹಿತಿ ನೀಡಿದರು.