ಬೆಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕ ಪ್ರೊ.ವಿಶ್ವನಾಥ ಅವರು ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಕುಲಪತಿಯಾಗಿ ನೇಮಕವಾಗಿದ್ದಾರೆ.

ಒಂದು ವರ್ಷದ ನಂತರ ನೂತನ ಕುಲಪತಿ ನೇಮಕವಾಗಿದೆ. ಕುಲಪತಿ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇಮಿಸಲಾಗಿದ್ದ ಶೋಧನಾ ಸಮಿತಿ ರಾಷ್ಟ್ರಮಟ್ಟದಲ್ಲಿ ಅರ್ಜಿಗಳನ್ನು ಆಹ್ವಾನಿಸಿತ್ತು. ಇದರಿಂದ ಪ್ರಕ್ರಿಯೆ ಸಾಕಷ್ಟು ವಿಳಂಬವಾಗಿತ್ತು.

ಕುಲಪತಿಯಾಗಿದ್ದ ಎನ್.ಆರ್. ಭಾನುಮೂರ್ತಿ ಅವರ ಅವಧಿ 2024 ರ ಜೂನ್ 21ಕ್ಕೆ ಮುಕ್ತಾಯವಾಗಿತ್ತು. ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ನಿರ್ದೇಶಕ ಡಿ. ರಾಜಶೇಖರ್ ಅವರನ್ನು ಪ್ರಭಾರ ಕುಲಪತಿಯಾಗಿ ನೇಮಿಸಲಾಗಿತ್ತು. ಅವರೂ ಕಳೆದ ಮೇ 31ರಂದು ನಿವೃತ್ತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.