ಬೆಂಗಳೂರು: ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ (94) ಅವರು ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಮೃತರಿಗೆ ಪತ್ನಿ ಇದ್ದಾರೆ. ಆರ್ಪಿಸಿ ಲೇಔಟ್ನಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮಧ್ಯಾಹ್ನ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ತುಮಕೂರು ಜಿಲ್ಲೆಯ ಬೆಳ್ಳಾವೆಯಲ್ಲಿ 1931ರಲ್ಲಿ ಜನಿಸಿದ ಸಿದ್ದಲಿಂಗಯ್ಯ ಅವರು, ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದರು. ಇದೇ ವಿಶ್ವವಿದ್ಯಾಲಯದಿಂದ 1961ರಲ್ಲಿ ಸ್ನಾತಕೋತ್ತರ ಪದವೀಧರರಾದ ಅವರು, ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಉದ್ಯೋಗ ಆರಂಭಿಸಿದ್ದರು. ಮುಂದೆ ಪ್ರಾಂಶುಪಾಲರಾದ ಅವರು, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು.

ಸಾಹಿತಿ, ಕವಿ ಹಾಗೂ ವಿಮರ್ಶಕರಾಗಿದ್ದ ಸಿದ್ದಲಿಂಗಯ್ಯ ಅವರು, 1989ರಿಂದ 1992ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

‘ರಸಗಂಗೆ’, ‘ಉತ್ತರ’, ‘ಚಿತ್ರ–ವಿಚಿತ್ರ’, ‘ಐವತ್ತರ ನೆರಳು’ ಸೇರಿ ವಿವಿಧ ಕವನ ಸಂಕಲನ, ‘ಶ್ರೀ ಕವಿ ಲಕ್ಷ್ಮೀಶ’, ‘ರತ್ನಾಕರವರ್ಣಿ’, ‘ಹೊಸಗನ್ನಡ ಕಾವ್ಯ’, ‘ಪಂಚಮುಖ ಚಾಮರಸ’, ‘ವಚನ ಸಾಹಿತ್ಯ-ಒಂದು ಇಣುಕು ನೋಟ’ ಸೇರಿ ವಿವಿಧ ವಿಮರ್ಶಾ ಕೃತಿಗಳು, ‘ಮಹಾನುಭಾವ ಬುದ್ಧ’, ‘ವಿರತಿಯ ಸಿರಿ ಸಪ್ಪಣ್ಣನವರು’, ‘ಬಸವಣ್ಣ’ ಮೊದಲಾದ ಜೀವನಚರಿತ್ರೆ, ‘ಶತಾಬ್ದಿ ದೀಪ’, ‘ಸಾಲು ದೀಪಗಳು’, ‘ಅಣ್ಣನ ನೂರೊಂದು ವಚನಗಳು’ ಸೇರಿ ವಿವಿಧ ಸಂಪಾದಿತ ಕೃತಿಗಳು ಸೇರಿ ಸಾಹಿತ್ಯ ವಿವಿಧ ಪ್ರಕಾರಗಳಲ್ಲಿ ಅವರು ಕೃತಿ ರಚಿಸಿದ್ದಾರೆ.

ತುಮಕೂರಿನ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಮುಂಬೈನ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ಸೇರಿ ಹಲವು ಗೌರವಕ್ಕೆ ಅವರು ಭಾಜನರಾಗಿದ್ದರು. ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.
.12ನೇ ಶತಮಾನದ ಶಿಕ್ಷಣದ ಸಂಶೋಧನೆ ಅಗತ್ಯ: ಪ್ರೊ. ಜಿ.ಎಸ್.ಸಿದ್ದಲಿಂಗಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.