ಬೆಂಗಳೂರು: ಕೋವಿಡ್-19 ಹರಡುವಿಕೆ ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವಿಸುವುದು ಮತ್ತು ಉಗುಳುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.

ಬಿಹಾರ, ಜಾರ್ಖಂಡ್ ರಾಜ್ಯಗಳಲ್ಲಿ ಈಗಾಗಲೇ ಎಲ್ಲ ರೀತಿಯ ಜಗಿಯುವ ತಂಬಾಕು, ಪಾನ್ ಮಸಾಲ ಉತ್ಪನ್ನಗಳನ್ನು ಸಾಂಕ್ರಾಮಿಕ ರೋಗ ಕಾಯ್ದೆ ಸೆಕ್ಷನ್ (2) ಅಡಿ ನಿಷೇಧಿಸಲಾಗಿದೆ.

ಇದೀಗ, ಶುಕ್ರವಾರ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದಿಂದ ಕೋವಿಡ್-19 ಮತ್ತು ಇತರ ಸಾಂಕ್ರಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೋವಿಡ್-19 ಹೆಚ್ಚುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್ ಕೂಡಾ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾಂಕ್ರಮಿಕ ರೋಗ ಹರಡುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ ಸರ್ಕಾರ, ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಉಗಿಯುವುದನ್ನು ನಿಷೇಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿತ್ತು.

ಈ ಆದೇಶವನ್ನು ಉಲ್ಲಂಘಿಸಿದರೆ, ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಅಧಿಕಾರಿಯ ಆದೇಶ ಉಲ್ಲಂಘನೆ), 268, 269, 279 (ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.