ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ತಾರತಮ್ಯ ನಿವಾರಿಸಿ, ಬಡ್ತಿ ನೀಡುವ ಭರವಸೆ ನೀಡಿದ್ದರು. ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಸಹ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದಕ್ಕೆ ಬಡ್ತಿ ನೀಡಲು ಆದೇಶಿಸಿತ್ತು. ಈಗ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ತಾಂತ್ರಿಕ ಶಿಕ್ಷಣ ಇಲಾಖೆ) (ವೃಂದ ಮತ್ತು ನೇಮಕಾತಿ) ನಿಯಮಗಳು 2024ಕ್ಕೆ ಸಂಪುಟ ಸಭೆಯ ಅನುಮೋದನೆ ದೊರೆತಿದೆ.