ಬೆಂಗಳೂರು: ಜ್ಯೇಷ್ಠತೆ ಸಂರಕ್ಷಣೆ ಕಾಯ್ದೆ ಜಾರಿಯಲ್ಲಿದ್ದರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮುಂಬಡ್ತಿಯಲ್ಲಿ ಮೀಸಲಾತಿ ನೀಡದೆ ಸತಾಯಿಸುತ್ತಿರುವ ಆರೋಪದ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮಂಗಳವಾರ (ಜುಲೈ 22) ಸಭೆ ನಡೆಸಲಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಧಿಕಾರಿ, ನೌಕರರಿಗೆ ಮುಂಬಡ್ತಿ ನೀಡುವ ವಿಷಯದಲ್ಲಿ ಸರ್ಕಾರ ಈಗಾಗಲೇ ಹೊರಡಿಸಿರುವ ಆದೇಶ ಹಾಗೂ ಸುತ್ತೋಲೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗೆ ಪತ್ರ ಬರೆದು ಸೂಚನೆ ನೀಡಿದ್ದರು.

ಮುಂಬಡ್ತಿಯಲ್ಲಿ ಮೀಸಲಾತಿ ನೀಡದಿರುವ ಬಗ್ಗೆ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ. ಚಂದ್ರಶೇಖರಯ್ಯ ಅವರು ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಚರ್ಚಿಸಲು ವಿಧಾನಸೌಧದಲ್ಲಿ ಮಧ್ಯಾಹ್ನ 3.30ಕ್ಕೆ ಆಯೋಜಿಸಿರುವ ಸಭೆಗೆ ಸಚಿವಾಲಯದ ಉಪ ಕಾರ್ಯದರ್ಶಿಗಿಂತ ಮೇಲಿನ ಶ್ರೇಣಿಯ ಅಧಿಕಾರಿಗಳು, ಈಗಾಗಲೇ ಕೋರಿರುವ ಮಾಹಿತಿಗಳ ಸಹಿತ ಹಾಜರಾಗಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಉಪ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

ಶಾಲಾ ಶಿಕ್ಷಣ, ಗೃಹ, ಅರಣ್ಯ, ತೋಟಗಾರಿಕೆ, ಕೃಷಿ, ಸಾರಿಗೆ, ನಗರಾಭಿವೃದ್ಧಿ, ಡಿಪಿಎಆರ್, ಇಂಧನ (ಕೆಪಿಟಿಸಿಎಲ್) ಈ ಒಂಬತ್ತು ಇಲಾಖೆಗಳಲ್ಲಿ ಮೀಸಲಾತಿ ರೋಸ್ಟರ್ ಬಿಂದುಗಳನ್ನು (ವಿವಿಧ ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಬಿಂದು) ಪಾಲಿಸುತ್ತಿಲ್ಲ ಎಂದು ಎಲ್ಲ ದಾಖಲೆಗಳ ಸಹಿತ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘವು ಮುಖ್ಯಮಂತ್ರಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.