ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಅಕ್ರಮ ತಡೆ ಕಾರ್ಯಾಚರಣೆ : ₹ 9.21 ಕೋಟಿ ಮೌಲ್ಯದ ಸ್ವತ್ತುಗಳ ವಶ

Published 5 ಮೇ 2023, 18:19 IST
Last Updated 5 ಮೇ 2023, 18:19 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣಾ ಅಕ್ರಮ ತಡೆಗೆ ರಾಜ್ಯದ ವಿವಿಧೆಡೆ ಗುರುವಾರ ನಡೆಸಿದ ಕಾರ್ಯಾಚರಣೆಗಳಲ್ಲಿ ₹ 5.38 ಕೋಟಿ ನಗದು ಸೇರಿದಂತೆ ₹ 9.21 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

₹ 2.84 ಕೋಟಿ ಮೌಲ್ಯದ 45,170 ಲೀಟರ್‌ ಮದ್ಯ, ₹ 91.48 ಲಕ್ಷ ಮೌಲ್ಯದ 86.99 ಕೆ.ಜಿ. ಮಾದಕ ವಸ್ತು ಮತ್ತು ₹ 7.12 ಲಕ್ಷ ಮೌಲ್ಯದ ಉಚಿತ ಕೊಡುಗೆಗಳನ್ನು ಗುರುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಚುನಾವಣಾ ನೀತಿಸಂಹಿತೆ ಜಾರಿಯಾದ ದಿನದಿಂದ ಈವರೆಗೆ ಒಟ್ಟು ₹ 340.23 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಅಕ್ರಮದ ಆರೋಪದಡಿ 2,672 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಬಕಾರಿ ಕಾಯ್ದೆ ಉಲ್ಲಂಘನೆ ಆರೋಪದಡಿ 38,000ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT