ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಗೌರವಧನ ಹೆಚ್ಚಿಸಲು ಆಗ್ರಹಿಸಿ ಪ್ರತಿಭಟನೆ

Published 21 ಫೆಬ್ರುವರಿ 2024, 14:09 IST
Last Updated 21 ಫೆಬ್ರುವರಿ 2024, 14:09 IST
ಅಕ್ಷರ ಗಾತ್ರ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ (6ನೇ ಗ್ಯಾರಂಟಿ) ಹೆಚ್ಚಿಸುವಂತೆ ಆಗ್ರಹಿಸಿ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ (ಎಐಟಿಯುಸಿ) ನೇತೃತ್ವದಲ್ಲಿ ಬುಧವಾರ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.

6ನೇ ಗ್ಯಾರಂಟಿ ರೂಪದಲ್ಲಿ ಗೌರವಧನ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಕೆಲವು ಜನಪರ ಯೋಜನೆ ಘೋಷಿಸಲಾಗಿದೆ. ಆದರೆ, ಮಹಿಳಾ ಸಮುದಾಯವನ್ನು ಸಬಲೀಕರಣ ಮಾಡಲು ನಿರ್ಲಕ್ಷ್ಯವಹಿಸಿಲಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಚುನಾವಣೆಗೂ ಮೊದಲು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರೇ 6ನೇ ಗ್ಯಾರಂಟಿಯಾಗಿ ಗೌರವಧನ ಹೆಚ್ಚಿಸುವ ಭರವಸೆ ನೀಡಿದ್ದರು. ಆದರೆ ಮಾತು ತಪ್ಪಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ ₹15 ಸಾವಿರ, ಸಹಾಯಕಿಯರಿಗೆ ₹10 ಸಾವಿರ ಗೌರವಧನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.

ನಿವೃತ್ತರಿಗೆ ₹3 ಲಕ್ಷ ಇಡುಗಂಟು ನೀಡುವ ಭರವಸೆಯೂ ಈಡೇರಿಲ್ಲ ಎಂದು ಆಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT