ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ನಾಯಕರ ಪ್ರತಿಭಟನೆ: ಸಿಎಸ್‌ ಅಮಾನತಿಗೆ ಬಿಜೆಪಿ ಆಗ್ರಹ

Published 23 ಏಪ್ರಿಲ್ 2024, 15:43 IST
Last Updated 23 ಏಪ್ರಿಲ್ 2024, 15:43 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿ ಇರುವಾಗಲೇ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರಿಗೆ ಪ್ರತಿಭಟನೆಗೆ ಅವಕಾಶ ನೀಡಿರುವ ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್‌ ಗೋಯಲ್ ಅವರನ್ನು ಅಮಾನತುಗೊಳಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌. ಅಶೋಕ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದರು.

ಬರ ಪರಿಹಾರದ ವಿಚಾರವನ್ನು ಮುಂದಿಟ್ಟುಕೊಂಡು ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್‌ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಆವರಣದಲ್ಲಿ ಅನಧಿಕೃತ ಪ್ರತಿಭಟನೆಗೆ ರಜನೀಶ್ ಗೋಯಲ್‌ ಅವಕಾಶ ಕೊಟ್ಟಿದ್ದಾರೆ. ಅವರು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅಶೋಕ ಅವರ ಜತೆ, ಬಿಜೆಪಿ ಪ್ರಧಾನಕಾರ್ಯದರ್ಶಿ ಪಿ.ರಾಜೀವ್‌, ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಜೆಡಿಎಸ್‌ನ ನಗರ ಘಟಕದ ಅಧ್ಯಕ್ಷ ರಮೇಶ್‌ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT