ಬೆಂಗಳೂರು: ರಾಜ್ಯದಲ್ಲಿರುವ 10 ಮಹಾನಗರ ಪಾಲಿಕೆಗಳ ಸಿಬ್ಬಂದಿಯ ವಿವಿಧ ಬೇಡಿಕೆಗಳಿಗೆ ನಗರಾಭಿವೃದ್ಧಿ ಇಲಾಖೆ ಸ್ಪಂದಿಸದಿರುವುದರಿಂದ ಜುಲೈ 7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಲು ನೌಕರರು ನಿರ್ಧರಿಸಿದ್ದಾರೆ.

‘ಪಾಲಿಕೆಗಳ ಅಧಿಕಾರಿ, ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ನಗರಾಭಿವೃದ್ಧಿ ಸಚಿವರು ಹಾಗೂ ಕಾರ್ಯದರ್ಶಿಯವರಿಗೆ ಹಲವು ಬಾರಿ ಮನವಿ ಪತ್ರಗಳನ್ನು ನೀಡಲಾಗಿದೆ. ಆದರೂ ಸ್ಪಂದಿಸಿಲ್ಲ. ಹೀಗಾಗಿ, ಎಲ್ಲರೂ ಸಾಮೂಹಿಕ ರಜೆ ಹಾಕಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ನ ರಾಜ್ಯ ಘಟಕದ ಅಧ್ಯಕ್ಷ ಎ. ಅಮೃತ್ ರಾಜ್ ಅವರು ಸುದ್ದಿಗಾರರಿಗೆ ತಿಳಿಸಿದರು.

‘ಸರ್ಕಾರಿ ನೌಕರರಿಗೆ ನೀಡಲಾಗಿರುವ 7ನೇ ವೇತನ ಆಯೋಗದ ಸೌಲಭ್ಯ ನೀಡಲು ಪಾಲಿಕೆಗಳ ಸಿಬ್ಬಂದಿಗೂ ಆರ್ಥಿಕ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು. ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆಜಿಐಡಿ ಮತ್ತು ಜಿಪಿಎಫ್ ಸೌಲಭ್ಯವನ್ನು ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ’ ಎಂದರು.

‘ಆರೋಗ್ಯ ಸೌಲಭ್ಯದ ಜ್ಯೋತಿ/ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪಾಲಿಕೆ ಸಿಬ್ಬಂದಿಗೆ ನೀಡಬೇಕು. ಪ್ರತಿ ವರ್ಷ ಕ್ರೀಡೆ ಆಯೋಜಿಸಬೇಕು. ವಿವಿಧ ವೃಂದದ ಹುದ್ದೆಗಳಿಗೆ ವೃಂದವಾರು ಮುಂಬಡ್ತಿ ನೀಡಬೇಕು ಎಂಬ ಬೇಡಿಕೆಗಳನ್ನು ಇರಿಸಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.