ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮರು ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಪಿಎಸ್‌ಐ ಅಭ್ಯರ್ಥಿಗಳ ಪ್ರತಿಭಟನೆ

Published 27 ನವೆಂಬರ್ 2023, 21:21 IST
Last Updated 27 ನವೆಂಬರ್ 2023, 21:21 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್‌ಐ (ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌) 545 ಹುದ್ದೆಗಳಿಗೆ ಮರು ಲಿಖಿತ ಪರೀಕ್ಷೆ ನಡೆಸಲು ನಿಗದಿಪಡಿಸಿದ ದಿನಾಂಕವನ್ನು ಮುಂದೂಡುವಂತೆ ಆಗ್ರಹಿಸಿ ಮುಖ್ಯಮಂತ್ರಿಯ ಗೃಹ ಕಚೇರಿ ಕೃಷ್ಣಾದ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾದ ಕೆಲವು ಅಭ್ಯರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದರು. 

‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ‘ಜನ ಸ್ಪಂದನ’ ನಡೆಸುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಅಭ್ಯರ್ಥಿಗಳು, ‘ಡಿ. 23 ರಂದು ಮರು ಪರೀಕ್ಷೆ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಏಕಾಏಕಿ ಪರೀಕ್ಷೆ ನಡೆಸಬಾರದು. ಈಗ ಪ್ರಕಟಿಸಿರುವ ದಿನಾಂಕವನ್ನು ಮುಂದೂಡಬೇಕು’ ಎಂದು ಆಗ್ರಹಿಸಿದರು.

‘ಪಿಎಸ್‌ಐ ಪರೀಕ್ಷೆ ಅಕ್ರಮ ಬಯಲಿಗೆ ಎಳೆದಿದ್ದು ನಾವು ಈ‌ ಸರ್ಕಾರ ಅಧಿಕಾರಕ್ಕೆ ಬರಲು ನಮ್ಮ ಪಾತ್ರ ದೊಡ್ಡದು. ಪರೀಕ್ಷೆಗೆ ತಯಾರಿ ನಡೆಸಲು ಎರಡರಿಂದ ಮೂರು ತಿಂಗಳು ಕಾಲಾವಕಾಶ ನೀಡಬೇಕು’ ಎಂದು ಒತ್ತಾಯಿಸಿದರು. ಆದರೆ, ಪ್ರತಿಭಟನೆಗೆ ಅವಕಾಶ ನೀಡದೆ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT