ಬೆಂಗಳೂರು: ‘ಖಾಸಗಿ ಲಾಬಿಗಳ ಒತ್ತಡಕ್ಕೆ ಮಣಿದಿರುವ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಅವರು ಹೊಸ ಜನೌಷಧಿ ಕೇಂದ್ರಗಳಿಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದು ಬಡವರ ವಿರೋಧಿ ಧೋರಣೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದ್ದಾರೆ.

ಈ ಕುರಿತು ‘ಎಕ್ಸ್’ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿರುವ ವಿಜಯೇಂದ್ರ, ಸರ್ಕಾರದ ನಡೆ ಮಾನವೀಯ ಮೌಲ್ಯವಿಲ್ಲದ ಜನವಿರೋಧಿಯಲ್ಲದೇ ಬೇರೇನೂ ಅಲ್ಲ ಎಂದು ಹೇಳಿದ್ದಾರೆ.

‘ದುಬಾರಿ ಔಷಧಿಗಳು ಬಡ ಜನರ ಆರೋಗ್ಯದ ಹಕ್ಕು ಕಸಿಯಬಾರದು. ಜನಸಾಮಾನ್ಯರಿಗೂ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ದೊರಕಬೇಕು ಎಂಬ ಮಹತ್ವದ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು, ಜನೌಷಧಿ ಕೇಂದ್ರ ಸ್ಥಾಪಿಸಿದರು. ಸದ್ಯ ರಾಜ್ಯದಲ್ಲಿ 8,900ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿಂದ ಪ್ರತಿ ದಿನ 20 ಲಕ್ಷಕ್ಕೂ ಹೆಚ್ಚು ಬಡ ಕುಟುಂಬಗಳು ಪ್ರಯೋಜನ ಪಡೆದುಕೊಳ್ಳುತ್ತಿವೆ’ ಎಂದಿದ್ದಾರೆ.

‘ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಜನೌಷಧಿ ಕೇಂದ್ರಗಳಿಗೆ ಅನುಮತಿ ನೀಡುವುದಿಲ್ಲ ಎಂಬ ಸಚಿವರ ಹೇಳಿಕೆಯನ್ನು ನೋಡಿದರೆ ಬಡವರ ಆರೋಗ್ಯದ ವಿಷಯದಲ್ಲೂ ರಾಜಕಾರಣ ಮಾಡಲು ಮುಂದಾಗಿರುವುದು ಸ್ಪಷ್ಟವಾಗುತ್ತದೆ. ಅನ್ನ, ಅಕ್ಷರ, ಆರೋಗ್ಯ ವಿಷಯದಲ್ಲೂ ಕೇಂದ್ರ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿಯುವ ಕಾಂಗ್ರೆಸ್ ಸರ್ಕಾರದ ನಡೆ ಜನವಿರೋಧಿ. ಖಾಸಗಿಯವರ ಪ್ರಭಾವಕ್ಕೆ ಮಣಿದು ಬಡವರಿಗೆ ದ್ರೋಹ ಬಗೆಯಲು ಹೊರಟರೆ ಕೈಕಟ್ಟಿ ಕೂರುವುದಿಲ್ಲ. ಸಚಿವರು ಕೂಡಲೇ ತಮ್ಮ ಹೇಳಿಕೆ ಹಿಂದಕ್ಕೆ ಪಡೆಯಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.