ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚೋದನಕಾರಿ ಭಾಷಣ: ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ

Published 14 ಜನವರಿ 2024, 6:44 IST
Last Updated 14 ಜನವರಿ 2024, 6:44 IST
ಅಕ್ಷರ ಗಾತ್ರ

ಕಾರವಾರ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಹೇಳಿಕೆ ನೀಡುವ ಜತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾತುಗಳನ್ನಾಡಿರುವ ಹಿನ್ನೆಲೆಯಲ್ಲಿ ಸೆಕ್ಷನ್ 153ಎ, 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

'ಸಂಸದರು ಕುಮಟಾದಲ್ಲಿ ನಡೆದ ಸಭೆಯಲ್ಲಿ ಮಾಡಿರುವ ಭಾಷಣ ಆಕ್ಷೇಪಾರ್ಹವಾಗಿರುವ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದೇವೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಪ್ರತಿಕ್ರಿಯಿಸಿದ್ದಾರೆ.

ಶನಿವಾರ ಕುಮಟಾದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಂಸದ ಅನಂತಕುಮಾರ ಹೆಗಡೆ, 'ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬ್ರಿ ಮಸೀದಿ ಮಾದರಿಯಲ್ಲಿ ಕೆಡವಬೇಕು' ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT