ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್ಐ ಪರೀಕ್ಷೆ ಮುಂದೂಡಿಕೆ

Published 21 ಮಾರ್ಚ್ 2024, 14:53 IST
Last Updated 21 ಮಾರ್ಚ್ 2024, 14:53 IST
ಅಕ್ಷರ ಗಾತ್ರ

ಬೆಂಗಳೂರು: ಮೇ 8ರಂದು ನಿಗದಿ ಮಾಡಿದ್ದ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ.

ಲೋಕಸಭಾ ಚುನಾವಣೆ ಕಾರಣಕ್ಕೆ ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿದ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿದ್ದಾರೆ.

402 ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್ಐ) ಹುದ್ದೆಗಳ ನೇರ ನೇಮಕಾತಿಗೆ ಮೇ 8ರಂದು ಲಿಖಿತ ಪರೀಕ್ಷೆ ನಿಗದಿಯಾಗಿತ್ತು. ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದವರಿಗೆ ಲಿಖಿತ ಪರೀಕ್ಷೆಗೆ ಅವಕಾಶ ನೀಡಲು ಕೆಇಎ ಪ್ರಕಟಣೆ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT