ಬೆಂಗಳೂರು: 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಹುದ್ದೆಗಳಿಗೆ ನಡೆಸಲಾಗಿದ್ದ ಮರು ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಪಡೆದ ಅಂಕಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಗಳನ್ನು ಮಾರ್ಚ್ 5ರ ಒಳಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಇ-ಮೇಲ್ ಮೂಲಕ ಸಲ್ಲಿಸಬೇಕು. ನಂತರ ಅಂತಿಮ ಪಟ್ಟಿ ಪ್ರಕಟಿಸಿ, ಗೃಹ ಇಲಾಖೆಗೆ ಸಲ್ಲಿಸಲಾಗುವುದು ಎಂದು ಕೆಇಎ ಹೇಳಿದೆ.

ಕಳೆದ ಬಾರಿ ನಡೆದಿದ್ದ ಇದೇ ನೇಮಕಾತಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಅಕ್ರಮಗಳು ಪತ್ತೆಯಾಗಿ ಆಯ್ಕೆ ಪಟ್ಟಿಯನ್ನೇ ರದ್ದು ಮಾಡಲಾಗಿತ್ತು. ಅಂದು ಅರ್ಜಿ ಸಲ್ಲಿಸಿದ್ದ ಸುಮಾರು 56 ಸಾವಿರ ಆಕಾಂಕ್ಷಿಗಳಲ್ಲಿ 35,823 ಅಭ್ಯರ್ಥಿಗಳು ಮರು ಪರೀಕ್ಷೆ ಬರೆದಿದ್ದರು. ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಇದೇ ವರ್ಷದ ಜ.23ರಂದು ಮರು ಪರೀಕ್ಷೆ ನಡೆಸಲಾಗಿತ್ತು. 33 ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ತಿರಸ್ಕೃತಗೊಂಡಿದ್ದವು. ಫೆ.23ರಂದು ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.