ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 556 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಸಿವಿಲ್ ಪಿಎಸ್‌ಐ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೊಸ ಅಭ್ಯರ್ಥಿಗಳು ಹಾಗೂ ಸೇವಾನಿರತ ಪೊಲೀಸರು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕದ 431 ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿಯಲ್ಲಿ 125 ಹುದ್ದೆಗಳ ನೇಮಕಾತಿ ಆಗಲಿದೆ. ಜೂನ್ 1ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲುಜೂನ್ 31 ಕೊನೆ ದಿನ.

ಪದವಿ ಹಾಗೂ ತತ್ಸಮಾನ ವಿದ್ಯಾರ್ಹತೆಯುಳ್ಳ ಕನಿಷ್ಠ 21 ವರ್ಷ ಪೂರೈಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 28 ವರ್ಷ ಹಾಗೂ ಎಸ್.ಸಿ., ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 30 ವರ್ಷ ಗರಿಷ್ಠ ವಯೋಮಿತಿ ಇದೆ. ಸೇವಾ ನಿರತ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ಹಾಗೂ ಎಸ್.ಸಿ., ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಈ ಬಾರಿಯ ನೇಮಕಾತಿ ಪ್ರಕ್ರಿಯೆಯಲ್ಲಿ ದೈಹಿಕ, ಲಿಖಿತ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಮಾತ್ರ ಇರಲಿದೆ. ಈ ಹಿಂದೆ 10 ಅಂಕಕ್ಕೆ ನಡೆಸಲಾಗುತ್ತಿದ್ದಸಂದರ್ಶನವನ್ನು ಈ ಬಾರಿ ರದ್ದು ಪಡಿಸಲಾಗಿದೆ. ನೇಮಕಾತಿ ಮಾಹಿತಿಗೆ; 080-22943346 ಅಥವಾ www.ksp.gov.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.