402 ಪಿಎಸ್‌ಐ ಹುದ್ದೆಗಳಿಗೆ ಮೊದಲಿಗೆ ಸೆ.22ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಪರೀಕ್ಷೆ ಮುಂದೂಡಬೇಕೆಂಬ ಒತ್ತಾಯ ಎದುರಾಗಿದ್ದರಿಂದಾಗಿ ಸೆ.28 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆ ದಿನ ಯುಪಿಎಸ್‌ಸಿಯ ಇಂಗ್ಲಿಷ್ ಕಡ್ಡಾಯ ಪರೀಕ್ಷೆ ಇರುವುದರಿಂದ ಅಂತಿಮವಾಗಿ ಅ.3ಕ್ಕೆ ನಡೆಸಲು ತೀರ್ಮಾನಿಸಲಾಗಿದೆ. ಕೆಇಎ ಅವರು ಅಧಿಕೃತವಾಗಿ ಪ್ರಕಟಣೆ ಹೊರಡಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.