ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್.ಡಿ.ಪಾಟೀಲ ಜಾಮೀನು ರದ್ದತಿ ಕೋರಿ ಸಿಐಡಿ ಅರ್ಜಿ

Last Updated 10 ಜನವರಿ 2023, 19:30 IST
ಅಕ್ಷರ ಗಾತ್ರ

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಅವರಿಗೆ ನೀಡಿದ ಷರತ್ತುಬದ್ಧ ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಅಧಿಕಾರಿಗಳು ಹೈಕೋರ್ಟ್‌ನ ಕಲಬುರಗಿ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಸಿಐಡಿ ಪೊಲೀಸರು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರ ಮೂಲಕ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್‌ನ ಕಲಬುರಗಿ ಪೀಠವು ವಿಚಾರಣೆಗೆ ಅರ್ಜಿಯನ್ನು ಅಂಗೀಕರಿಸಿದೆ.

‘ಹೈಕೋರ್ಟ್‌ನ ಕಲಬುರಗಿ ಪೀಠದಿಂದ ಜಾಮೀನು ಪಡೆದು, ಬಿಡುಗಡೆಯಾದ ದಿನದಿಂದ ಆರ್.ಡಿ. ಪಾಟೀಲ ನಾಪತ್ತೆ ಆಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಹಲವು ನೋಟಿಸ್ ಜಾರಿಗೊಳಿಸಿದರೂ ಪ್ರತಿಕ್ರಿಯಿಸಿಲ್ಲ. ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT