ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಅಕ್ರಮದ ಪ್ರಮುಖ ಆರೋಪಿ ಪಾಟೀಲ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆ

Last Updated 4 ಏಪ್ರಿಲ್ 2023, 13:10 IST
ಅಕ್ಷರ ಗಾತ್ರ

ಅಫಜಲಪುರ (ಕಲಬುರಗಿ ಜಿಲ್ಲೆ): ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದಲ್ಲಿ ಸದ್ಯ ಜೈಲಿನಲ್ಲಿರುವ ಪ್ರಮುಖ ಕಿಂಗ್‌ಪಿನ್ ಆರ್.ಡಿ. ಪಾಟೀಲ ಜನಾರ್ದನರೆಡ್ಡಿ ನೇತೃತ್ವದ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸೇರ್ಪಡೆಯಾಗಲಿದ್ದು, ಆ ಪಕ್ಷದಿಂದಲೇ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಅವರ ಸಹೋದರ, ಕಾಂಗ್ರೆಸ್ ಮುಖಂಡರಾಗಿದ್ದ ಮಹಾಂತೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಪ್ರಿಲ್ 10ರಂದು ಪಟ್ದಣದ ನ್ಯಾಷನಲ್ ಫಂಕ್ಷನ್ ಹಾಲ್‌ನಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಮಾವೇಶದಲ್ಲಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನರೆಡ್ಡಿ ನೇತೃತ್ವದಲ್ಲಿ ಸೇರ್ಪಡೆಯಾಗಲಿದ್ದೇವೆ’ ಎಂದು ಪಾಟೀಲ ತಿಳಿಸಿದರು.

‘ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ಆರ್.ಡಿ.ಪಾಟೀಲ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ನಮ್ಮ ಅಭಿಮಾನಿಗಳು ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾದರೆ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದ್ದರಿಂದ ನಾವು ರೆಡ್ಡಿ ಅವರೊಂದಿಗೆ ಪಕ್ಷ ಸೇರ್ಪಡೆ ಮತ್ತು ಸಮಾವೇಶ ಮಾಡುವ ಕುರಿತು ಚರ್ಚಿಸಿದ್ದು, ಅದಕ್ಕೆ ಅವರು ಸಮ್ಮತಿ ನೀಡಿದ್ದಾರೆ. ಸಮಾವೇಶದಲ್ಲಿ 20 ಸಾವಿರಕ್ಕಿಂತ ಹೆಚ್ಚು ಜನರು ಸೇರಲಿದ್ದಾರೆ’ ಎಂದರು.

ಮುಖಂಡರಾದ ಬಸವರಾಜ ಪಾಟೀಲ ಅಳ್ಳಗಿ, ಹೀರೂ ರಾಠೋಡ ಮಾತನಾಡಿ, ‘ಕ್ಷೇತ್ರದಲ್ಲಿ ಕಳೆದ 30, 40 ವರ್ಷಗಳಿಂದ ಯಾವುದೇ ಹೇಳಿಕೊಳ್ಳುವಂತಹ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಪಟ್ಟಣದಲ್ಲಿ ಜನರು ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಅದಕ್ಕಾಗಿ ಬದಲಾವಣೆ ತರಲು ನಾವೆಲ್ಲ ಜನಾರ್ಧನ ರೆಡ್ಡಿ ಅವರ ಪಕ್ಷವನ್ನು ಸೇರ್ಪಡೆ ಮಾಡುತ್ತಿದ್ದೇವೆ. ಜೊತೆಗೆ ಆರ್.ಡಿ. ಪಾಟೀಲ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆ’ ಎಂದು ತಿಳಿಸಿದರು.

ಮುಖಂಡರಾದ ಲಕ್ಷ್ಮಿಪುತ್ರ ಜಮಾದಾರ, ಸತೀಶ ಹವಳಗಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT