ಬೆಂಗಳೂರು: ಪಿ.ಯು. ಕಾಲೇಜುಗಳಲ್ಲಿ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳನ್ನು ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಬದಲಿಸಿ, ಲ್ಯಾಪ್‌ಟಾಪ್ ಬಳಕೆಗೆ ಅವಕಾಶ ನೀಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪಿ.ಯು.ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಾಲೇಜು ಸಮಯದಲ್ಲಿ ಮೊಬೈಲ್ ಮತ್ತು ಲ್ಯಾಪ್‌ಟಾಪ್ ಇಟ್ಟುಕೊಳ್ಳುವುದನ್ನು ಶೈಕ್ಷಣಿಕ ಹಿತದೃಷ್ಟಿಯಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶಿಸಿ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿತ್ತು.

ಆ ಆದೇಶದಿಂದ ವಿದ್ಯಾರ್ಥಿ ಹಾಗೂ ಉಪನ್ಯಾಸಕರಲ್ಲಿ ಗೊಂದಲ ಮೂಡಿತ್ತು. ಕಂಪ್ಯೂಟರ್ ಸೈನ್ಸ್, ವ್ಯವಹಾರ ಅಧ್ಯಯನ ಹಾಗೂ ವಿಜ್ಞಾನದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅಗತ್ಯವಿದೆ ಎಂಬುದು ಅಧಿಕಾರಿಗಳಿಗೆ ಮನದಟ್ಟಾದ ಬಳಿಕ ಪರಿಷ್ಕೃತ ಆದೇಶವನ್ನು ಹೊರಡಿಸಿದ್ದಾರೆ. ಹಾಗಾಗಿ ಮೊಬೈಲ್ ಬಳಕೆ ಮಾತ್ರ ಸಂಪೂರ್ಣ ನಿಷೇಧವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.