ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಪರೀಕ್ಷೆ: ಮೊದಲ ದಿನ ಸುಸೂತ್ರ

Published 1 ಮಾರ್ಚ್ 2024, 15:55 IST
Last Updated 1 ಮಾರ್ಚ್ 2024, 15:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ 1,124 ಕೇಂದ್ರಗಳಲ್ಲಿ ಶುಕ್ರವಾರ ಆರಂಭವಾದ ದ್ವಿತೀಯ ಪಿಯು ಮೊದಲ ಮುಖ್ಯ ಪರೀಕ್ಷೆ ಮೊದಲ ದಿನ ಸುಗಮವಾಗಿ ನೆರವೇರಿತು.

ಕನ್ನಡ ಹಾಗೂ ಅರೇಬಿಕ್‌ ಭಾಷಾ ವಿಷಯಗಳ ಪರೀಕ್ಷೆ ಬರೆಯಲು 5,25,787 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. 5,07,556 (ಶೇ 96.53) ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 18,231 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ನಕಲು ಮಾಡುತ್ತಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಎಚ್‌.ವಿ.ನಂಜುಂಡಯ್ಯ ಸ್ಮಾರಕ ಬಾಲಕಿಯರ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ವಿದ್ಯಾರ್ಥಿನಿಯರಿಗೆ ಆತ್ಮಸ್ಥೈರ್ಯ ತುಂಬಿದರು. ಮಾರ್ಚ್‌ 4ರಂದು ಗಣಿತ ಹಾಗೂ ಶಿಕ್ಷಣಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT