ಬೆಂಗಳೂರು: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಪ್ರಸ್ತಾವಿತ ವೇಳಾಪಟ್ಟಿ ಪ್ರಕಟವಾಗಿದ್ದು, 2019ರ ಮಾರ್ಚ್ 1ರಿಂದ 18 ರವರೆಗೆ ಪರೀಕ್ಷೆ ನಡೆಯಲಿದೆ.
ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರೊಳಗೆ ಜಂಟಿ ನಿರ್ದೇಶಕರು(ಪರೀಕ್ಷೆ), ಪದವಿಪೂರ್ವ ಶಿಕ್ಷಣ ಇಲಾಖೆ, ಸಂಪಿಗೆ ರಸ್ತೆ, 18 ನೇ ಅಡ್ಡ ರಸ್ತೆ, ಮಲ್ಲೇಶ್ವರ, ಬೆಂಗಳೂರು–12 ಇಲ್ಲಿಗೆ ಸಲ್ಲಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಗದಿತ ದಿನಾಂಕದೊಳಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದೂ ಅವರು ಹೇಳಿದ್ದಾರೆ.