ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ–2 ಫಲಿತಾಂಶ ಶುಕ್ರವಾರ (ಮೇ 16) ಸಂಜೆ 5ಕ್ಕೆ ಪ್ರಕಟವಾಗಲಿದೆ.

ದ್ವಿತೀಯ ಪಿಯು ಪರೀಕ್ಷೆ–1ರಲ್ಲಿ ಅನುತ್ತೀರ್ಣರಾಗಿದ್ದ 1.70 ಲಕ್ಷ ವಿದ್ಯಾರ್ಥಿಗಳಲ್ಲಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ–2ಕ್ಕೆ ನೋಂದಾಯಿಸಿಕೊಂಡಿದ್ದರು. ಪರೀಕ್ಷಾ ಶುಲ್ಕ ಇಲ್ಲದೇ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದ್ದರಿಂದ ಶೇ 92.4ರಷ್ಟು ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. 70 ಸಾವಿರ ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗೆ ಹಾಜರಾಗಿದ್ದರು.

ಏ.24 ರಿಂದ ಮೇ 8ರವರೆಗೆ ನಡೆಯುವ ಎರಡನೇ ಪರೀಕ್ಷೆ ನಡೆದಿತ್ತು. ಎಂಜನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಸಿಇಟಿ ಫಲಿತಾಂಶಕ್ಕೂ ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆ–2 ಫಲಿತಾಂಶ ಸಿದ್ಧಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.