ಬೆಂಗಳೂರು: ‘ಯಾದಗಿರಿ-ಸೈದಾಪುರ ಜಿಲ್ಲಾ ಮುಖ್ಯ ರಸ್ತೆಯಲ್ಲಿ (ಎಂಡಿಆರ್) ಸೇತುವೆ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಅಗತ್ಯ ತಾಂತ್ರಿಕ ಅರ್ಹತೆ ಮತ್ತು ಕಾರ್ಯಾನುಭವ ಇಲ್ಲದ ಗುತ್ತಿಗೆದಾರರಿಗೆ ಟೆಂಡರ್ ನೀಡಲಾಗಿದೆ’ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಸ್ಥಳೀಯ ಶರಣಪ್ಪ ಗೌಡ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ಅವರ ವಾದ ಆಲಿಸಿದ ನ್ಯಾಯಪೀಠ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ, ಯಾದಗಿರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಖಾಸಗಿ ನಿರ್ಮಾಣ ಸಂಸ್ಥೆಯಾದ ಶ್ರೀ ಬನದೇಶ್ವರ ಕನ್ಸ್ಟ್ರಕ್ಷನ್ ಕಂಪನಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು 2026ರ ಜನವರಿ 9ಕ್ಕೆ ಮುಂದೂಡಿತು. ಅಂತೆಯೇ, ‘ಗುತ್ತಿಗೆದಾರ ಕಂಪನಿಗೆ ಇರುವ ಹಿಂದಿನ ಕಾರ್ಯಾನುಭವದ ಬಗ್ಗೆ ಮಾಹಿತಿ ನೀಡಿ ಎಂದು ಯಾದಗಿರಿ ವಿಭಾಗದ ಕಾರ್ಯಕಾರಿ ಎಂಜಿಯರ್ ಅವರಿಗೆ ನಿರ್ದೇಶಿಸಿತು.

ಪರಿಶೀಲಿಸಿ ಕ್ರಮ ಕೈಗೊಳ್ಳಲು ಆದೇಶ

‘ತುಮಕೂರಿನ ಬೆಳಗುಂಬದಲ್ಲಿ ಭಾರತೀಯ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಅಸೋಸಿಯೇಷನ್ಗೆ ಗುತ್ತಿಗೆ ಆಧಾರದಲ್ಲಿ ಮಂಜೂರಾದ ಎರಡು ಎಕರೆ ಜಮೀನಿನ ಬಳಕೆಗೆ ವಿಧಿಸಲಾಗಿದ್ದ ಷರತ್ತುಗಳನ್ನು ಉಲ್ಲಂಘಿಸಿಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್, ಸ್ಥಳೀಯ ತಹಶೀಲ್ದಾರ್ಗೆ ನಿರ್ದೇಶಿಸಿದೆ.

ಈ ಸಂಬಂಧ ಬೆಳಗುಂಬ ಗ್ರಾಮದ ಬಿ.ಎಸ್.ವೆಂಕಟೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ತುಮಕೂರು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಒಂದೊಮ್ಮೆ ಅರ್ಜಿದಾರರು ಆರೋಪಿಸಿರುವಂತೆ ಗುತ್ತಿಗೆ ಆಧಾರದಲ್ಲಿ ಮಂಜೂರಾಗಿರುವ 2 ಎಕರೆ ಜಮೀನಿನ ಬಳಕೆಯಲ್ಲಿ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ವಾಣಿಜ್ಯ ಉದ್ದೇಶದಿಂದ ಆ ಜಾಗದಲ್ಲಿ ಸಮ್ಮೇಳನ ಸಭಾಂಗಣ ನಿರ್ಮಾಣ ಮಾಡಲಾಗುತ್ತಿದೆ ಎಂಬುದು ಕಂಡು ಬಂದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿದ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.