ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಏಕರೂಪದ ಪಠ್ಯಕ್ರಮಕ್ಕೆ ಪ್ರಕಾಶಕರ ಒತ್ತಾಯ

Published 12 ಜೂನ್ 2024, 16:27 IST
Last Updated 12 ಜೂನ್ 2024, 16:27 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಪದವಿ ತರಗತಿಗಳಿಗೆ ಏಕರೂಪದ ಪಠ್ಯಕ್ರಮ ರಚಿಸಬೇಕು ಎಂದು ಕರ್ನಾಟಕ ಪ್ರಕಾಶಕರ ಮತ್ತು ಪುಸ್ತಕ ವ್ಯಾಪಾರಿಗಳ ಸಂಘ ಒತ್ತಾಯಿಸಿದೆ.

ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸುವಾಗ ಆಯಾ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಬರುವ ಅಧ್ಯಯನ ಮಂಡಳಿಗಳಿಗೆ ಪಠ್ಯಕ್ರಮ ರೂಪಿಸಲು ಸೂಚಿಸಲಾಗಿದೆ. ಇದರಿಂದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆ ಅನನುಕೂಲವಾಗುತ್ತದೆ ಎಂದು ಸಂಘದ ಕಾರ್ಯದರ್ಶಿ ಎ.ಪಿ. ಪ್ರದೀಪ್‌ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷರಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ಒಂದು ವಿಶ್ವವಿದ್ಯಾಲಯದ ವಿದ್ಯಾರ್ಥಿ ಅನಿವಾರ್ಯ ಕಾರಣಗಳಿಂದ ಸೆಮಿಸ್ಟರ್‌ ಮಧ್ಯದಲ್ಲೇ ಮತ್ತೊಂದು ವಿಶ್ವವಿದ್ಯಾಲಯಕ್ಕೆ ಸೇರ್ಪಡೆಯಾದರೆ ಪಠ್ಯಕ್ರಮ ವ್ಯತ್ಯಾಸದಿಂದ ತೊಂದರೆ ಅನುಭವಿಸಬೇಕಾಗುತ್ತದೆ. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೂ ಏಕರೂಪದ ಪಠ್ಯಕ್ರಮ ಸಾಧ್ಯವಾಗಿದ್ದರೆ, ವಿಭಾಗವಾರು ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಾದರೂ ಜಾರಿಗೊಳಿಸಬೇಕು. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT