ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಪಿಯು ಪರೀಕ್ಷೆ ಆರಂಭ

Published 1 ಮಾರ್ಚ್ 2024, 1:11 IST
Last Updated 1 ಮಾರ್ಚ್ 2024, 1:11 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯು ಮೊದಲ ಮುಖ್ಯ ಪರೀಕ್ಷೆ ಮಾರ್ಚ್‌ 1ರಿಂದ ರಾಜ್ಯದ 1,124 ಕೇಂದ್ರಗಳಲ್ಲಿ ನಡೆಯಲಿದೆ. 

3.30 ಲಕ್ಷ ಬಾಲಕರು, 3.67 ಲಕ್ಷ ಬಾಲಕಿಯರು ಸೇರಿದಂತೆ 6.98 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಮಾರ್ಚ್‌ 22ರವರೆಗೆ ನಿತ್ಯ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿವೆ. 

2 ಸಾವಿರಕ್ಕೂ ಹೆಚ್ಚು ಉಪನ್ಯಾಸಕರನ್ನು ಖಜಾನೆಯಲ್ಲಿನ ಪ್ರಶ್ನೆ ಪತ್ರಿಕೆ ನಿಗಾಕ್ಕೆ ಹಾಗೂ ನಾಲ್ಕು ಸಾವಿರ ಉಪನ್ಯಾಸಕರನ್ನು ವಿಚಕ್ಷಣ ದಳಕ್ಕೆ ನಿಯೋಜಿಸಲಾಗಿದೆ. ಪ್ರತಿ ಕೇಂದ್ರಕ್ಕೂ ನಾಲ್ವರು ಪೊಲೀಸರನ್ನು ನಿಯೋಜಿಸಲಾಗಿದೆ. 

‘ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಪರೀಕ್ಷಾ ಅಕ್ರಮಕ್ಕೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೇಂದ್ರಗಳ ಒಳಗೆ ಮೊಬೈಲ್‌ ಫೋನ್‌ ನಿಷೇಧಿಸಲಾಗಿದೆ. ಮುಖ್ಯ ಅಧೀಕ್ಷಕರು ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸಲು ಅನುಮತಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ’ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT