ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ರದ್ದುಪಡಿಸಿರುವುದರಿಂದ, ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ವಿದ್ಯಾರ್ಥಿಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ರಾಷ್ಟ್ರೀಯ ಪ್ರವೇಶ ಪರೀಕ್ಷೆಯ (ನೀಟ್) ಅಂಕ ಮಾತ್ರ ಪರಿಗಣಿಸುವ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ದ್ವಿತೀಯ ಪಿಯು ಪರೀಕ್ಷೆ ರದ್ದು ಕಾರಣದಿಂದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ, ನೀಟ್ ಅಂಕ ಮಾತ್ರ ಪರಿಗಣಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಈ ಬಗ್ಗೆ ಪತ್ರವನ್ನೂ ಬರೆದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಅಶ್ವತ್ಥನಾರಾಯಣ, ‘ಅಧಿಕಾರಿಗಳು ಮತ್ತು ಉನ್ನತ ಶಿಕ್ಷಣ ತಜ್ಞರ ಜತೆ ಚರ್ಚಿಸಿ ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.

‘ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ದ್ವಿತೀಯ ಪಿಯುದಲ್ಲಿ ಕನಿಷ್ಠ ಇಂತಿಷ್ಟು ಅಂಕ ಗಳಿಸಬೇಕಿತ್ತು. ಅದರ ಬದಲು ಸಿಇಟಿ ರ್ಯಾಂಕ್ ಪರಿಗಣಿಸಲು ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಇದಕ್ಕೆ ಕಾಯ್ದೆಗೆ ತಿದ್ದುಪಡಿ ಆಗಬೇಕು. ಈ ಬಗ್ಗೆ ಕಾನೂನು ತಜ್ಞರು, ಸಿ.ಎಂ ಜೊತೆಗೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.

ಸುರೇಶ್ಕುಮಾರ್ ಪತ್ರ: ‘ದ್ವಿತೀಯ ಪಿಯು ಮತ್ತು ಸಿಇಟಿ ಅಂಕ ಪರಿಗಣಿಸಿ, ವೆಯ್ಟೇಜ್ ನೀಡಿ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ರ್ಯಾಂಕಿಂಗ್ ಘೋಷಿಸಲಾಗುತ್ತದೆ. ಈ ಬಾರಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಲು ನಿರ್ಧರಿಸಿರುವುದರಿಂದ ಪ್ರಥಮ ಪಿಯು ಮತ್ತು ಎಸ್ಸೆಸ್ಸೆಲ್ಸಿ ಅಂಕ ಪರಿಗಣಿಸಿ, ಸಮನಾದ ಸೂಕ್ತ ಮೌಲ್ಯ ಸೇರಿಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಲು ನಿರ್ಧರಿಸಲಾಗಿದೆ’ ಎಂದು ಪತ್ರದಲ್ಲಿ ಸುರೇಶ್ ಕುಮಾರ್ ಉಲ್ಲೇಖಿಸಿದ್ದಾರೆ.

‘ಗ್ರೇಡಿಂಗ್ ಫಲಿತಾಂಶ ವಿದ್ಯಾರ್ಥಿಗಳ ಪ್ರತಿಭೆಯನ್ನು ಖಚಿತವಾಗಿ ವ್ಯಕ್ತಪಡಿಸಿದರೂ, ಅದನ್ನು ನಿರಾಕರಿಸಿ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ, ಈ ಬಾರಿಯ ದ್ವಿತೀಯ ಪಿಯು ವಿದ್ಯಾರ್ಥಿಗಳ ಅಂಕವನ್ನು ಸಿಇಟಿ ರ್ಯಾಂಕಿಂಗ್ ವೇಳೆ ಗಣನೆಗೆ ತೆಗೆದುಕೊಳ್ಳುವಾಗ, ಈ ಫಲಿತಾಂಶವನ್ನು ಪ್ರಶ್ನಿಸಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗಬಹುದು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಎಸ್ಸೆಸ್ಸೆಲ್ಸಿ ಅಂಕ ಆಧರಿಸಿ ದ್ವಿತೀಯ ಪಿಯು ಫಲಿತಾಂಶ: ಸುರೇಶ್ಕುಮಾರ್

‘ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸಮಗ್ರ ಮತ್ತು ಹೆಚ್ಚು ನ್ಯಾಯಯುತವಾಗಲು, ಈ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಅಂಕವನ್ನು ಅವಲೋಕಿಸಿ, ಅದಕ್ಕೆ ಸಮನಾದ ಸೂಕ್ತ ಮೌಲ್ಯ ಸೇರಿಸಿ ಫಲಿತಾಂಶ ಘೋಷಿಸಬೇಕು’ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಚಿವ ಸುರೇಶ್ಕುಮಾರ್ ಸೂಚಿಸಿದ್ದಾರೆ.

‘ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್ಸೆಸ್ಸೆಲ್ಸಿ ಅಂಕಗಳನ್ನು ಪಡೆದು, ಪ್ರಥಮ ಪಿಯು ದಲ್ಲಿ ಪಡೆದ ಅಂಕಗಳೊಂದಿಗೆ ಹೊಂದಿಸಿ, ಜೂನ್ ತಿಂಗಳ ಅಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶ ಘೋಷಿಸಬೇಕು’ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.