ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು: ಆ.21ರಿಂದ ಎರಡನೇ ಪೂರಕ ಪರೀಕ್ಷೆ

Published 28 ಜುಲೈ 2023, 15:49 IST
Last Updated 28 ಜುಲೈ 2023, 15:49 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆ.21ರಿಂದ ಎರಡನೇ ಪೂರಕ ಪರೀಕ್ಷೆ ನಡೆಯಲಿದೆ.

2023ರ ವಾರ್ಷಿಕ ಪರೀಕ್ಷೆ ಹಾಗೂ ಅದಕ್ಕೂ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್‌ನಲ್ಲಿ ಪೂರಕ ಪರೀಕ್ಷೆ ನಡೆಸಲಾಗಿತ್ತು. ಇದೇ ಮೊದಲ ಬಾರಿ ಒಂದೇ ಶೈಕ್ಷಣಿಕ ವರ್ಷದಲ್ಲಿ ಎರಡನೇ ಪೂರಕ ಪರೀಕ್ಷೆ ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಸೂಚನೆ ಹೊರಡಿಸಿದೆ.

ವಿದ್ಯಾರ್ಥಿಗಳು ತಾವು ಓದಿದ ಕಾಲೇಜಿಗೆ ತೆರಳಿ, ಕಾಲೇಜಿನ ಲಾಗಿನ್‌ ಮೂಲಕ ಆ. 10ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು. ನಂತರ ಆನ್‌ಲೈನ್‌ ಮೂಲಕ ಪರೀಕ್ಷಾ ಶುಲ್ಕ ಪಾವತಿಸಬೇಕು ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.

ಪರೀಕ್ಷೆಗಳು ಆ.21ರಿಂದ ಸೆ.2ರವರೆಗೆ ನಡೆಯಲಿವೆ. ಮಾಹಿತಿಗೆ http://kseab.karnataka.gov.in ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT