ನವದೆಹಲಿ: ಕರ್ನಾಟಕಕ್ಕೆ ಅಗತ್ಯವಿರುವಷ್ಟು ಅಡುಗೆ ಅನಿಲ ಸಿಲಿಂಡರ್ಗಳನ್ನು ಸರಬರಾಜು ಮಾಡುವಂತೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ನಿರ್ದೇಶನ ನೀಡಿದರು.

ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ಗಳ ಕೊರತೆ ಉಂಟಾಗಿರುವ ಬಗ್ಗೆ ಹೋಟೆಲ್ ಉದ್ಯಮದವರು ಕೇಂದ್ರ ಕಾರ್ಮಿಕ ಸಚಿವೆ ಶೋಭಾ ಕರಂದ್ಲಾಜೆ ಅವರ ಗಮನಕ್ಕೆ ತಂದಿದ್ದರು. ಶೋಭಾ ಅವರು ಹರ್ದೀಪ್ ಸಿಂಗ್ ಅವರನ್ನು ಸಂಸತ್ ಭವನದಲ್ಲಿ ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಶೋಭಾ, ‘ಜಾಗತಿಕ ಮಟ್ಟದಲ್ಲಿ ದೊಡ್ಡ ಯುದ್ಧ ನಡೆಯುತ್ತಿದೆ. ಕಚ್ಚಾತೈಲ ವಲಯದಲ್ಲಿ ಭಾರತ ಆತ್ಮ ನಿರ್ಭರ ಆಗಿಲ್ಲ. ನಮ್ಮ ದೇಶವು ಪಶ್ಚಿಮ ಏಷ್ಯಾ ಮೇಲೆ ಅವಲಂಬಿಸಿದೆ. ನಮ್ಮ ಕಚ್ಚಾತೈಲ ಹೊತ್ತ ಹಡಗುಗಳು ಬರಬೇಕಿವೆ. ಹೋಟೆಲ್ ಮಾಲೀಕರ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದಿದ್ದೇನೆ’ ಎಂದರು.

‘ದೇಶದ 33 ಕೋಟಿ ಮನೆಗಳಿಗೆ ಎಲ್ಪಿಜಿ ನೀಡುವುದು ನಮ್ಮ ಆದ್ಯತೆ. ಜತೆಗೆ, ಆಸ್ಪತ್ರೆ ಹಾಗೂ ಕಾಲೇಜುಗಳಿಗೆ ಅಡುಗೆ ಅನಿಲ ಒದಗಿಸಬೇಕಿದೆ. ಈ ಸಮಸ್ಯೆ ಬಗ್ಗೆ ಪರಿಶೀಲಿಸಲು ಸರ್ಕಾರ ಸಮಿತಿ ರಚಿಸಿದೆ’ ಎಂದರು.

‘ಇಂತಹ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಳ್ಳುವ ಜನರಿದ್ದಾರೆ. ಈ ಬಗ್ಗೆ ಕೂಡಾ ಕೇಂದ್ರ ಸರ್ಕಾರ ಗಮನ ಹರಿಸುತ್ತಿದೆ. ದೇಶಕ್ಕೆ ಆಪತ್ತು ಬಂದಾಗ ಜನರು ಒಟ್ಟಾಗಿ ಎದುರಿಸಬೇಕು. ಕಾಳಸಂತೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಮಾರಾಟ ತಡೆಯಲು ಜಿಲ್ಲಾವಾರು ತಂಡ ರಚಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.