ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲಿನ ಭಯದಿಂದ ಬಿಜೆಪಿ– ಜೆಡಿಎಸ್‌ ಮೈತ್ರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ಅವರು ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ
Published 30 ಜನವರಿ 2024, 16:11 IST
Last Updated 30 ಜನವರಿ 2024, 16:11 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯಲಿರುವ ಉಪಚುನಾವಣೆಯಲ್ಲಿ ಸೋಲಿನ ಭಯದಿಂದ ಬಿಜೆಪಿ– ಜೆಡಿಎಸ್‌ನವರು ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಮಾಡಿಕೊಂಡಿದ್ದರೂ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ಅವರು ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಿದ್ದರಾಮಯ್ಯ, ‘ಇದೇ ಕ್ಷೇತ್ರದಿಂದ ಪರಿಷತ್‌ ಸದಸ್ಯರಾಗಿದ್ದ ಪುಟ್ಟಣ್ಣ ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ರಾಜೀನಾಮೆ ನೀಡಿದ್ದರು. ಸತತ ನಾಲ್ಕು ಬಾರಿ ಈ ಕ್ಷೇತ್ರದಿಂದ ಗೆದ್ದಿರುವ ಅವರು, ಶಿಕ್ಷಕರ ‌‌‌‌‌‌‌ಮನಸ್ಸು ಗೆದ್ದಿದ್ದಾರೆ’ ಎಂದರು.

ಶಿಕ್ಷಕರಿಗೆ ಕೊಟ್ಟಿರುವ ಭರವಸೆ ಈಡೇರಿಸುತ್ತೇವೆ: ‘ಶಿಕ್ಷಕರ ಬದುಕಿನ ಬಗ್ಗೆ ನಮ್ಮ ಸರ್ಕಾರ ಕಾಳಜಿ ವಹಿಸಲಿದೆ. ಚುನಾವಣೆಗೂ ಮೊದಲು ಶಿಕ್ಷಕರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸುತ್ತೇವೆ. ಸದ್ಯ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಈ ಬಗ್ಗೆ ಮಾತನಾಡುವುದಿಲ್ಲ. ಹಳೆ ಪಿಂಚಣಿ ಯೋಜನೆ ಸೇರಿದಂತೆ ಅನೇಕ ವಿಚಾರವಾಗಿ ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಅಭ್ಯರ್ಥಿ ಅನುಭವಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT