ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕೋಪಯೋಗಿ ಇಲಾಖೆ: ಗುತ್ತಿಗೆದಾರರಿಗೆ ₹6,333 ಕೋಟಿ ಬಾಕಿ

Last Updated 29 ಡಿಸೆಂಬರ್ 2022, 6:28 IST
ಅಕ್ಷರ ಗಾತ್ರ

ಬೆಳಗಾವಿ: ಲೋಕೋಪಯೋಗಿ ಇಲಾಖೆಯು ಗುತ್ತಿಗೆದಾರರಿಗೆ 2022ರ ನವೆಂಬರ್‌ ಅಂತ್ಯಕ್ಕೆ ₹6,333.28 ಕೋಟಿ ಬಾಕಿ ಪಾವತಿಸಬೇಕಾಗಿದೆ.

ವಿಧಾನ ಪರಿಷತ್‌ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಶರಣಗೌಡ ಬಯ್ಯಾಪುರಅವರ ಪ್ರಶ್ನೆಗೆ ಉತ್ತರಿಸಿರುವ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ, ‘ಪ್ರಸಕ್ತ ಹಣಕಾಸು ವರ್ಷದ ಅಂತ್ಯದ ಒಳಗೆ ಬಾಕಿ ಮೊತ್ತವನ್ನು ಗುತ್ತಿಗೆದಾರರಿಗೆ ಪಾವತಿಸಲಾಗುವುದು’ ಎಂದು ಭರವಸೆ ನೀಡಿದರು.

‘ಅನುದಾನ ಮಂಜೂರಾಗದಿದ್ದರೂ ಶಾಸಕರು ಒತ್ತಡ ಹೇರಿ ರಸ್ತೆ ಕಾಮಗಾರಿಗಳನ್ನು ಮಾಡಿಸಿಕೊಳ್ಳುತ್ತಾರೆ. ಹೀಗಾಗಿ, ಅಪಾರ ಪ್ರಮಾಣದ ಬಿಲ್‌ ಬಾಕಿ ಉಳಿದಿದೆ. ಹಿರಿತನ ಆಧಾರದ ಮೇಲೆ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಹಣವನ್ನು ಪಾವತಿಸಲಾಗುವುದು’ ಎಂದು ವಿವರಿಸಿದರು.

ಶರಣಗೌಡ ಬಯ್ಯಾಪುರ ಪ್ರತಿಕ್ರಿಯಿಸಿ, ‘ಮಾರ್ಚ್‌ ವೇಳೆಗೆ ₹10 ಸಾವಿರ ಕೋಟಿಯಷ್ಟಾಗುತ್ತದೆ. ಗುತ್ತಿಗೆದಾರರು ಸಹ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ತಲುಪಿದ್ದಾರೆ. ತ್ವರಿತಗತಿಯಲ್ಲಿ ಬಿಲ್‌ ಪಾವತಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT