ಬೆಂಗಳೂರು: ಶಿರಾಡಿ ಘಾಟ್‌ನಲ್ಲಿ ಚತುಷ್ಪಥ ರಸ್ತೆ ನಿರ್ಮಾಣವನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ
ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಬುಧವಾರ ಗಡ್ಕರಿ ಅವರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಚತುಷ್ಪಥ ನಿರ್ಮಾಣ ಪೂರ್ಣಗೊಳಿಸುವುದು ಆದ್ಯತೆಯಾಗಿದೆ. ಸುರಂಗ ಮಾರ್ಗ ನಿರ್ಮಿಸುವ ವಿಚಾರದಲ್ಲಿ ಸಮಾಲೋಚಕರ ಜತೆ ಮಾತುಕತೆ ನಡೆದಿದೆ.

ಅಲ್ಲದೆ, ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ತಾತ್ವಿಕ ಅನುಮೋದನೆ ನೀಡಿರುವ ನಾಲ್ಕು ಹೆದ್ದಾರಿಗಳ ಕುರಿತು ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದೆ. ಅವುಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವಂತೆ ಅವರು ಮನವಿ ಮಾಡಿದರು.

ವಿಜಯಪುರ–ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ 0 ರಿಂದ 80 ಕಿ.ಮೀವರೆಗೆ ಅಭಿವೃದ್ಧಿಪಡಿಸುವ ಕಾಮಗಾರಿ ನಡೆಯುತ್ತಿದ್ದು, 80 ನೇ ಕಿ.ಮೀ ನಿಂದ 168.90 ಕಿ.ಮೀ.ವರೆಗೆ ಅಭಿವೃದ್ಧಿ ಕಾರ್ಯವನ್ನು ಮುಂದುವರಿಸಲು ಗಡ್ಕರಿಯವರು ಒಪ್ಪಿಗೆ ನೀಡಿದ್ದಾರೆ. ಇವೆಲ್ಲವನ್ನೂ ಭಾರತ್‌ಮಾಲಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿಗಳು ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಅವುಗಳ ದುರಸ್ತಿಗೆ ₹ 184.85 ಕೋಟಿ ಶೀಘ್ರವೇ ಬಿಡುಗಡೆ ಮಾಡುವಂತೆಯೂ ಅವರು ಮನವಿ ಮಾಡಿದರು.

ರಾಜ್ಯದಲ್ಲಿ 400 ಎಕರೆಯಲ್ಲಿ ಎಲೆಕ್ಟ್ರಾನಿಕ್ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ. ಆಪ್ಟಿಕಲ್ ಫೈಬರ್ ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಲು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಮನವಿ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಕಂದಾಯ ಸಚಿವ ಆರ್. ಅಶೋಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.