ಬೆಂಗಳೂರು: ಬೆಂಗಳೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಕ್ವಾಂಟಮ್ ಸಿಟಿಯಲ್ಲಿ ಸಹಭಾಗಿತ್ವಕ್ಕೆ ಸ್ವಿಡ್ಜರ್ಲೆಂಡ್ನ ಕಂಪನಿಗಳೂ ಸೇರಿ ಜಾಗತಿಕ ಮಟ್ಟದ ಹಲವು ಕಂಪನಿಗಳು ಆಸಕ್ತಿ ತೋರಿವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

ಸ್ವಿಡ್ಜರ್ಲೆಂಡ್ನಲ್ಲಿ ಈಚೆಗೆ ನಡೆದ ಸ್ವಿಸ್ನೆಕ್ಸ್ ಕ್ವಾಂಟಮ್ ಸಮಾವೇಶದಲ್ಲಿ ಭಾಗಿಯಾಗಿದ್ದರ ಬಗ್ಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ‘ಕ್ವಾಂಟಮ್ ಕ್ಷೇತ್ರದಲ್ಲಿ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ಈ ಕ್ಷೇತ್ರದ ಅಭಿವೃದ್ಧಿಗೆ ಕರ್ನಾಟಕದಲ್ಲಿ ಇರುವ ಅವಕಾಶಗಳ ಬಗ್ಗೆ ಸಮಾವೇಶದಲ್ಲಿ ಭಾಗಿಯಾಗಿದ್ದ ಕಂಪನಿಗಳಿಗೆ ವಿವರಿಸಲಾಗಿದೆ’ ಎಂದು ಹೇಳಿದರು.

‘ದೇಶದ ಮೊದಲ ಕ್ವಾಂಟಮ್ ಸಮಾವೇಶ ಬೆಂಗಳೂರಿನಲ್ಲಿ ನಡೆದಿತ್ತು ಮತ್ತು ಅದರಲ್ಲಿ ಘೋಷಿಸಿದ್ದಂತೆ ಕ್ವಾಂಟಮ್ ಸಿಟಿ ಸ್ಥಾಪನೆಗೆ ರಾಜ್ಯ ಸರ್ಕಾರವು ಈಗಾಗಲೇ ಜಮೀನು ಮಂಜೂರು ಮಾಡಿದೆ. ಜತೆಗೆ ಕ್ವಾಂಟಮ್ ತಂತ್ರಜ್ಞಾನದಲ್ಲಿ ಪರಿಣಿತರನ್ನು ರೂಪಿಸುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಕೋರ್ಸ್ಗಳನ್ನು ಆರಂಭಿಸಲಾಗಿದೆ. ಈ ಅಂಶಗಳು ಕ್ವಾಂಟಮ್ ಕ್ಷೇತ್ರದ ಜಾಗತಿಕ ಮಟ್ಟದ ಕಂಪನಿಗಳನ್ನು ಆಕರ್ಷಿಸಿವೆ’ ಎಂದರು.

‘ಈ ಪ್ರವಾಸದ ವೇಳೆ ಕ್ವಾಂಟಮ್ ಬೇಸೆಲ್, ಸಿಇಆರ್ಎನ್, ಇಟಿಎಚ್ ಝ್ಯೂರಿಚ್ ಆ್ಯಂಡ್ ಝ್ಯೂರಿಚ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆಗಳಿಗೆ ಭೇಟಿ ನೀಡಲಾಗಿತ್ತು. ಬೆಂಗಳೂರಿನ ಕ್ವಾಂಟಮ್ ಸಿಟಿಯಲ್ಲಿ ಹೂಡಿಕೆ ಮಾಡುವಂತೆ ಈ ಕಂಪನಿಗಳಿಗೆ ಆಹ್ವಾನ ನೀಡಲಾಗಿದೆ. ಕಂಪನಿಗಳ ಪ್ರತಿನಿಧಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.