ಬೆಂಗಳೂರು: ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ‘ರಣದೀಪ್’ ಆಡಳಿತ ಹೇರಿದೆ ಎಂದು ವಿರೋಧ ಪಕ್ಷ ನಾಯಕ ಆರ್. ಅಶೋಕ ಟೀಕಿಸಿದ್ದಾರೆ.

ಮಂಗಳವಾರ ಕಾಂಗ್ರೆಸ್ನ 11 ಸಚಿವರ ಜೊತೆ ಸುರ್ಜೇವಾಲಾ ಸಭೆ ನಡೆಸಿರುವ ಕುರಿತು ಮಾಧ್ಯಮ ವರದಿಯನ್ನು ಎಕ್ಸ್ನಲ್ಲಿ ಹಂಚಿಕೊಂಡಿರುವ ಅಶೋಕ, ‘ರಾಜ್ಯದಲ್ಲಿ ‘ರಣದೀಪ್’ ಆಡಳಿತ ಜಾರಿ ಆಗಿದೆಯಾ? ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಾ?’ ಎಂದು ಲೇವಡಿ ಮಾಡಿದ್ದಾರೆ.

‘ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್ಗಳಲ್ಲಿ ಅತೃಪ್ತ ಶಾಸಕಾರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ಸುರ್ಜೇವಾಲಾ ಅವರು ಗುರುವಾರ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ’ ಎಂದು ಹೇಳಿದ್ದಾರೆ.

‘ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ. ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು ರಾಹುಲ್ ಗಾಂಧಿ ಅವರಿಗೆ ಶಕ್ತಿ ಇಲ್ಲ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನವನ್ನ ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ ಕಾಂಗ್ರೆಸ್ ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.