ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ‘ಹಮಾರೆ ಬಾರಹ್’ ಹಿಂದಿ ಚಲನಚಿತ್ರವನ್ನು ನಿಷೇಧಿಸಲು ತೀರ್ಮಾನಿಸಿದೆ. ಇದು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.

ಈ ಕುರಿತು ‘ಎಕ್ಸ್’ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಈ ಚಲನಚಿತ್ರವನ್ನು ನಿಷೇಧಿಸುವ ಮೂಲಕ ಯಾರನ್ನು ಓಲೈಸಲು ಮುಂದಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ.

‘ಈ ಚಲನಚಿತ್ರವು ಎಲ್ಲ ರಾಜ್ಯಗಳಲ್ಲೂ ಬಿಡುಗಡೆಯಾಗಿ ಪ್ರದರ್ಶನಗೊಳ್ಳುತ್ತಿದೆ. ಈ ಚಿತ್ರ ಪ್ರದರ್ಶನ ಮಾಡುವುದರಿಂದ ಕಾನೂನು ಸುವ್ಯವಸ್ಥೆಗೆ ಭಂಗ ಬರುವುದಿಲ್ಲ. ನಾಗರಿಕ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವುದರ ಬದಲಿಗೆ ಸಿದ್ದರಾಮಯ್ಯ ಅವರು, ಮೂಲಭೂತವಾದಿಗಳ ತಾಳಕ್ಕೆ ಕುಣಿಯುತ್ತಿದ್ದಾರೆ. ಮತ ಬ್ಯಾಂಕ್ ರಾಜಕಾರಣ ಮಾಡುವ ಇವರಿಗೆ ನಾಚಿಕೆ ಆಗಬೇಕು‘ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.