ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದು, ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ.

ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಯ ಗಮನಕ್ಕೆ ಬಾರದೆ ₹187 ಕೋಟಿ ಮೊತ್ತದ ಹಗರಣ ನಡೆಯಲು ಸಾಧ್ಯವಿಲ್ಲ. ತಮ್ಮ ಕುರ್ಚಿ ಉಳಿಸಿಕೊಳ್ಳಲು, ಲೋಕಸಭಾ ಚುನಾವಣೆಗಾಗಿ ರಾಹುಲ್ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಹಣ ನೀಡದೇ ಇದ್ದಿದ್ದರೆ ಡಿ.ಕೆ. ಶಿವಕುಮಾರ್ಗೆ ಕುರ್ಚಿ ಬಿಟ್ಟು ಹೋಗಬೇಕಿತ್ತು. ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರಬಂದಿದೆ. ಈಗ ಮುಚ್ಚಿಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ. ಜೂನ್ 3 ರಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜೂನ್ 3ರಂದು ಬೆಳಗ್ಗೆ 9.30ಕ್ಕೆ ಕುಮಾರಕೃಪಾ ಅತಿಥಿ ಗೃಹದಿಂದ ಮೆರವಣಿಗೆಯಲ್ಲಿ ಹೊರಟು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.