ಬೆಂಗಳೂರು: ‘ಚುನಾವಣೆ ಸಂದರ್ಭದಲ್ಲಿ ನಂದಿನಿ ಹೆಸರಿನಲ್ಲಿ ರಾಜಕೀಯ ಮಾಡಿ, ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಿನಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದೀರಲ್ಲ. ಇದೇನಾ ನೀವು ನಂದಿನಿ ಬ್ರ್ಯಾಂಡ್ ಉಳಿಸುವ ಪರಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ ‘ಸಿಗದ ಪ್ರೋತ್ಸಾಹ, ಹೈನುಗಾರಿಕೆಗೆ ಹಿನ್ನಡೆ’ ವರದಿಯನ್ನು ಉಲ್ಲೇಖಿಸಿ ಅವರು ‘ಎಕ್ಸ್’ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ ₹703 ಕೋಟಿ ಪ್ರೋತ್ಸಾಹ ಧನವನ್ನು 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ. ಇದು ರೈತ ವಿರೋಧಿ ಸರ್ಕಾರ’ ಎಂದು ಕಿಡಿಕಾರಿದ್ದಾರೆ.

‘ನಂದಿನಿ ಸಂಸ್ಥೆಯ ಕೋಟ್ಯಂತರ ರೂಪಾಯಿ ಹಣ ಬಳಸಿಕೊಂಡು ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಸರ್ಕಾರದ ಬಳಿ ಇದೆ. ಆದರೆ, ನಂದಿನಿ ಬ್ರ್ಯಾಂಡ್ ಅನ್ನು ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹ ಧನ ನೀಡಲು ಹಣವಿಲ್ಲವೇ, ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.