ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಫಲಿತಾಂಶ ಬಿಜೆಪಿ ಪರ ಬಂದಿದೆ ಎಂದು ಬಿಜೆಪಿಯ ಕೆಲ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಆದರೆ, ಇನ್ನೂ ಅಧಿಕೃತ ಫಲಿತಾಂಶ ಹೊರಬಿದ್ದಿಲ್ಲ.

ಅದಾಗ್ಯೂ ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಆರ್. ಅಶೋಕ್ ಅವರು, ಮರು ಮತ ಎಣಿಕೆ ಕಾಂಗ್ರೆಸ್ ಪಕ್ಷದ ಕರಾಳ ಮುಖವನ್ನ ಮತ್ತೊಮ್ಮೆ ಬಯಲು ಮಾಡಿದೆ. ಜನಾದೇಶಕ್ಕೆ ಮೋಸ ಮಾಡಿ ಅಕ್ರಮವಾಗಿ ಗೆಲುವು ಸಾಧಿಸಲು ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗ ನೀಡಿದ ತಕ್ಕ ಉತ್ತರ ಇದು ಎಂದು ಸಮರ್ಥಿಸಿಕೊಂಡಿದ್ದಾರೆ.

2023ರ ಚುನಾವಣೆಯಲ್ಲಿ 279 ಅಂಚೆ ಮತಗಳನ್ನು ಅಕ್ರಮವಾಗಿ ತಿರಸ್ಕರಿಸುವ ಮೂಲಕ ಜನಾದೇಶವನ್ನು ಕಸಿದುಕೊಳ್ಳಲಾಗಿತ್ತು. ಅಂದು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಮನವಿಯನ್ನು ತಿರಸ್ಕರಿಸಿ ಕಾಂಗ್ರೆಸ್ನ ಟಿ.ಡಿ. ರಾಜೇಗೌಡರನ್ನು ವಿಜೇತರೆಂದು ಘೋಷಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ಅಧಿಕಾರ ಬಲಕ್ಕೆ ಮಣಿಯದ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಆರ್. ನಟರಾಜ್ ಅವರ ಪೀಠವು ನೀಡಿದ ಐತಿಹಾಸಿಕ ಆದೇಶದಂತೆ ನಿನ್ನೆ ಮರು ಎಣಿಕೆ ನಡೆಯಿತು. ಕಾಂಗ್ರೆಸ್ ಪಕ್ಷದ ಮೋಸ ಬಯಲಾಯಿತು ಎಂದಿದ್ದಾರೆ.

ಕಳೆದ ಮೂರು ವರ್ಷಗಳಿಂದ ಅನರ್ಹವಾಗಿ ಅಧಿಕಾರ ಅನುಭವಿಸಿದ ಕಾಂಗ್ರೆಸ್ಗೆ ಈಗ ಮುಖಭಂಗವಾಗಿದೆ. ಇದು ಕೇವಲ ಒಬ್ಬ ವ್ಯಕ್ತಿಯ ಗೆಲುವಲ್ಲ, ಇದು ಪ್ರಜಾಪ್ರಭುತ್ವದ ಗೆಲುವು. ಶೃಂಗೇರಿಯ ಮತದಾರರ ಮತದ ಮೌಲ್ಯಕ್ಕೆ ಸಂದ ಜಯ ಎಂದು ಹೇಳಿದ್ದಾರೆ.

ನ್ಯಾಯದೇವತೆಯ ಮೇಲೆ ವಿಶ್ವಾಸವಿಟ್ಟು ಸಂವಿಧಾನಾತ್ಮಕವಾಗಿ ಹೋರಾಡಿ ನ್ಯಾಯ ಪಡೆದ ಜೀವರಾಜ್ ಅವರಿಗೆ ಅಭಿನಂದನೆಗಳು ಎಂದು ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.