ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಪರಿಹಾರ ನೀಡಲು ಮೀನ– ಮೇಷ: ಆರ್‌.ಅಶೋಕ

Published 28 ಡಿಸೆಂಬರ್ 2023, 16:32 IST
Last Updated 28 ಡಿಸೆಂಬರ್ 2023, 16:32 IST
ಅಕ್ಷರ ಗಾತ್ರ

ಬೆಂಗಳೂರು: ‘ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ₹2,000 ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿ ತಿಂಗಳು ಕಳೆದಿದ್ದರೂ ಹಣ ಬಿಡುಗಡೆಗೆ ಮೀನ– ಮೇಷ ಎಣಿಸಲಾಗುತ್ತಿದೆ. ಇದು ಲಜ್ಜೆಗೆಟ್ಟ ಸರ್ಕಾರ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಬರೆದಿರುವ ಅವರು, ರೈತರನ್ನು ಅವಮಾನಿಸುವುದು ಈ ಸರ್ಕಾರದ ನಿತ್ಯದ ಕಾಯಕವಾಗಿದೆ ಎಂದು ಹೇಳಿದ್ದಾರೆ.

‘ರೈತರ ಆತ್ಮಹತ್ಯೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು, ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲಿ ಎಂದು ರೈತರು ಬಯಸುತ್ತಿದ್ದಾರೆ ಎಂದು ರೈತರಿಗೆ ಅಪಮಾನ ಮಾಡುವುದು, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು, ಇವುಗಳಲ್ಲೇ ಕಾಂಗ್ರೆಸ್‌ ಸರ್ಕಾರ ಕಾಲಹರಣ ಮಾಡುತ್ತಿದೆಯೇ ಹೊರತು, ರೈತರ ನೆರವಿಗೆ ಬರುವ ಉದ್ದೇಶವೇ ಇದ್ದಂತಿಲ್ಲ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT