ಚಿತ್ರದುರ್ಗ: ‘ಕಾಂಗ್ರೆಸ್ ಸರ್ಕಾರದ ಆಡಳಿತದ ಸಾವಿರ ದಿನಗಳು ರಾಜ್ಯದ ಪಾಲಿಗೆ ಕರಾಳ ದಿನಗಳಾಗಿವೆ. ಈಗ ಯಾವ ಪುರುಷಾರ್ಥಕ್ಕೆ ಸಾವಿರ ದಿನಗಳ ಸಾಧನಾ ಸಮಾವೇಶ ಮಾಡುತ್ತಿದ್ದಾರೋ ಗೊತ್ತಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಡಾ ಹಗರಣದ ಮೂಲಕ ಸಿದ್ದರಾಮಯ್ಯ ಅವರು ಹಗರಣಗಳ ಮೂಲ ಪುರುಷ ಎನಿಸಿದ್ದಾರೆ. ಸಾವಿರ ದಿನಗಳು ಬರೀ ಲೂಟಿಯಿಂದ ಕೂಡಿದ್ದವು. ರಾಹುಲ್ ಗಾಂಧಿ ಅವರಿಗೆ
ಲೂಟಿ ಹಣ ರವಾನೆಯಾಗುತ್ತಿದೆ. ಅಲಿಬಾಬಾ ಮತ್ತು 30 ಮಂದಿ ಕಳ್ಳರಿಂದ ಸಾಧನಾ ಸಮಾವೇಶ ನಡೆಯುತ್ತಿದೆ’ ಎಂದು ಆರೋಪಿಸಿದರು.

‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ, ರಾಜಕೀಯ ಮಾಡಲು ಬಂದಿದ್ದೇನೆ ಎನ್ನುತ್ತಾರೆ. ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಎಂದು ಅವರ ಬೆಂಬಲಿಗರು ಹೇಳುತ್ತಾರೆ. ಈಗ ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಎಂಬುದೇ ಗೊತ್ತಿಲ್ಲ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.