ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗಮಂಗಲ ಗಲಭೆ ವೇಳೆ ಪಾಕ್ ಪರ ಘೋಷಣೆ?: ಅನುಮಾನ ವ್ಯಕ್ತಪಡಿಸಿದ ಆರ್.ಅಶೋಕ

Published : 16 ಸೆಪ್ಟೆಂಬರ್ 2024, 6:12 IST
Last Updated : 16 ಸೆಪ್ಟೆಂಬರ್ 2024, 6:12 IST
ಫಾಲೋ ಮಾಡಿ
Comments

ಬೆಂಗಳೂರು: ನಾಗಮಂಗಲ ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗುತ್ತಿದೆ' ಎಂದಿದ್ದಾರೆ.

ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್‌ನಲ್ಲಿ ಪ್ಯಾಲೆಸ್ಟೀನ್ ಧ್ವಜ ಹಿಡಿದು ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ. ಇಂತಹ ಘಟನೆಗಳು ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಅಂತರರಾಜ್ಯ, ಅಂತರರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ ಎಂದು ಅವರು ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT