ಬೆಂಗಳೂರು: ‘ಸರ್ವಾಧಿಕಾರಿಯಾಗಿದ್ದ ಆಯತೊಲ್ಲಾ ಅಲಿ ಖಮೇನಿ ಪರ ಮೆರವಣಿಗೆಗೆ ಅವಕಾಶ ನೀಡಬಾರದು. ಈ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದರು.

‘ಇರಾನ್– ಇಸ್ರೇಲ್ ಯುದ್ಧದಲ್ಲಿ ಖಮೇನಿ ಹತನಾಗಿದ್ದು, ಆತನ ಪರವಾಗಿ ಇಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಲು ಅವಕಾಶ ನೀಡಬಾರದು’ ಎಂದು ಅವರು ಆಗ್ರಹಿಸಿದರು.

‘ಖಮೇನಿ ವಿರುದ್ಧ ಅವರ ದೇಶದಲ್ಲೇ ಆಂತರಿಕ ದಂಗೆ ನಡೆದಿತ್ತು. ಅಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿತ್ತು. ಸಾವಿರಾರು ಜನರನ್ನು ಗುಂಡಿಟ್ಟು ಕೊಲ್ಲಲಾಗಿತ್ತು. ಆದರೆ, ಬೆಂಗಳೂರು ಸೇರಿ ಭಾರತದ ಅನೇಕ ಕಡೆ ಖಮೇನಿ ಪರವಾಗಿ ಮುಸ್ಲಿಮರು ಪ್ರತಿಭಟನೆ ಮಾಡಿದ್ದಾರೆ’ ಎಂದು ಹೇಳಿದರು.

‘ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರು ಸೇರಿ ಎಲ್ಲ ಭಾರತೀಯರನ್ನು ಮರಳಿ ಕರೆ ತರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕಾರ್ಯೋನ್ಮುಖವಾಗಿದೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರಲಾಗುತ್ತದೆ’ ಎಂದರು.

‘ಭಾರತ ಮತ್ತು ಇಸ್ರೇಲ್ ನಡುವಿನ ಸಂಬಂಧ ಉತ್ತಮವಾಗಿದೆ. ಭಾರತ ಯಾವುದೇ ದೇಶಗಳ ವಿರೋಧಿ ಅಲ್ಲ. ಯುದ್ಧ ನಡೆಯಬಾರದು ಎಂಬುದು ನನ್ನ ಅಭಿಪ್ರಾಯ. ಕೇಂದ್ರ ಸರ್ಕಾರ ಎಂದೂ ಯುದ್ಧಕ್ಕೆ ಬೆಂಬಲ ಕೊಟ್ಟಿಲ್ಲ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಕನ್ನಡಿಗರ ರಕ್ಷಣೆಗಾಗಿ ಕೆಲಸ ಮಾಡಲಿ’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.