ಬೆಂಗಳೂರು: ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳು ಮತದಾರರ ಪಟ್ಟಿಗೆ ಸೇರಿದರೆ ದೇಶದ ಭದ್ರತೆಗೆ ಅಪಾಯ. ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್ಐಆರ್) ಅಂತಹ ಕಳ್ಳ ವೋಟುಗಳನ್ನು ಸೇರಿಸಲು ಅವಕಾಶ ನೀಡಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ (ಎಸ್ಐಆರ್) ಮಾಹಿತಿ ಕಚೇರಿ ಉದ್ಘಾಟನೆ ಕಾರ್ಯಕ್ರಮದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ, ಕರ್ನಾಟಕ-ತೆಲಂಗಾಣದ ಎಸ್ಐಆರ್ ಪ್ರಭಾರಿ ಅಲ್ಕಾ ಗುರ್ಜರ್ ಅವರು ಮಾಹಿತಿ ಕಚೇರಿ ಉದ್ಘಾಟಿಸಿದರು.

ಪಾಕಿಸ್ತಾನ, ಬಾಂಗ್ಲಾದ ಬಹಳಷ್ಟು ಜನರು ಕರ್ನಾಟಕಕ್ಕೆ ಬಂದಿದ್ದಾರೆ. ಅವರು ಈ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡರೆ ಕಾಯಂ ನಾಗರಿಕರಾಗುತ್ತಾರೆ. ಇದು ದೇಶದ ಭದ್ರತೆಗೆ ಅಪಾಯಕಾರಿ. ಈ ಕುರಿತು ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು, ನಿಗಾವಹಿಸಲು ಬಿಜೆಪಿ ಕಾರ್ಯಾಗಾರದಲ್ಲಿ ಚರ್ಚೆ ಆಗಿದೆ ಎಂದು ಅಶೋಕ ಹೇಳಿದರು.

‘ಸಿದ್ದರಾಮಯ್ಯ ಅವರು ನಾನು ಸಮಾಜವಾದಿ, ಜಾತಿವಾದಿ ಹಾಗೂ ಕುಟುಂಬವಾದಿ ಅಲ್ಲ ಎಂದು ಭಾಷಣ ಮಾಡಿದ್ದಾರೆ. ನನ್ನ ಮಗನನ್ನೂ ಸ್ವಲ್ಪ ನೋಡ್ಕೊಳ್ರಿ ಎಂದಿದ್ದಾರೆ. ಇಷ್ಟು ದಿನ ಇವರನ್ನು ನೋಡಿದ್ದಾಗಿದೆ. ಇನ್ನು ಅವರ ಮಗನನ್ನೂ ನೋಡಿಕೊಳ್ಳಬೇಕು. ಇನ್ನೊಂದು ಆರು ತಿಂಗಳ ಬಳಿಕ ನನ್ನ ಮೊಮ್ಮಗನನ್ನೂ ನೋಡಿಕೊಳ್ಳಿ ಎನ್ನುತ್ತಾರೆ. ಇದು ರಾಜಕೀಯ ವ್ಯವಸ್ಥೆಯಾ ಅಥವಾ ರಾಜರ ಆಡಳಿತವೇ’ ಎಂದು ಪ್ರಶ್ನಿಸಿದರು.

ಎಲ್ಪಿಜಿ ಸಿಲಿಂಡರ್ ದುರುಪಯೋಗ ತಡೆಗೆ ಎಸ್ಮಾ ಜಾರಿಗೊಳಿಸಲಾಗಿದೆ. ಕಾಳಸಂತೆಯನ್ನು ತಡೆಗಟ್ಟುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು. ಯುದ್ಧದ ಸನ್ನಿವೇಶದಲ್ಲಿ ಜನರು, ರಾಜಕಾರಣಿಗಳು ಸಹಕಾರ ನೀಡಬೇಕು. ಸಿದ್ದರಾಮಯ್ಯ ಅವರು ಯುದ್ಧದ ಸಮಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.