ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಜೆಡಿಎಸ್ ಕಾದು ನೋಡುವ ತಂತ್ರದ ಮೊರೆ ಹೋಗಿದೆ. ನಾಮಪತ್ರ ಸಲ್ಲಿಕೆ ಕೊನೆಗೊಳ್ಳಲು ನಾಲ್ಕು ದಿನಗಳಷ್ಟೇ ಬಾಕಿ ಇದ್ದರೂ ಉಮೇದುವಾರರ ಹೆಸರನ್ನು ಅಂತಿಮಗೊಳಿಸಿಲ್ಲ.

ಅ. 2ರಂದು ಆರ್.ಆರ್. ನಗರ ಕ್ಷೇತ್ರದ ಪಕ್ಷದ ಮುಖಂಡರ ಸಭೆ ನಡೆಸಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮೂವರು ಸಂಭವನೀಯರ ಹೆಸರನ್ನು ಅಂತಿಮಗೊಳಿಸಿದ್ದರು. ಸೋಮವಾರವೇ ನಾಮಪತ್ರ ಸಲ್ಲಿಸುವುದಾಗಿ ಶನಿವಾರ ಹೇಳಿಕೆ ನೀಡಿದ್ದರು. ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದರೆ ಜೆಡಿಎಸ್‌ನಿಂದ ಅವಕಾಶ ನೀಡುವ ಸಾಧ್ಯತೆ ಇದೆ. ಇದಕ್ಕಾಗಿ ಅಭ್ಯರ್ಥಿ ಘೋಷಣೆ ಮಾಡದೆ ಕಾಯಲಾಗುತ್ತಿದೆ ಎಂದೂ ಹೇಳಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.