ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಗಾಮಿ ಸಭಾಧ್ಯಕ್ಷರಾಗಿ ಆರ್.ವಿ. ದೇಶಪಾಂಡೆ

Published 22 ಮೇ 2023, 0:28 IST
Last Updated 22 ಮೇ 2023, 0:28 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರದಿಂದ (ಮೇ 22) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವ ವಿಧಾನಸಭೆ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ.

‘ಸದನದಿಂದ ಸಭಾಧ್ಯಕ್ಷರು ಆಯ್ಕೆ ಆಗುವವರೆಗೆ ವಿಧಾನಸಭಾಧ್ಯಕ್ಷರ ಕರ್ತವ್ಯವನ್ನು ನಿರ್ವಹಿಸಲು ಆರ್‌.ವಿ. ದೇಶಪಾಂಡೆ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ’ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಅಸ್ತಿತ್ವಕ್ಕೆ ಬಂದ ಹೊಸ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಆರ್.ವಿ. ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರನ್ನಾಗಿ ನೇಮಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲು ನಿರ್ಧರಿಸಲಾಗಿತ್ತು.

‌ಮೂರು ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಅಧಿವೇಶನದಲ್ಲಿ ಪೂರ್ಣಾವಧಿ ಸಭಾಧ್ಯಕ್ಷರ ಆಯ್ಕೆಯೂ ನಡೆಯಲಿದೆ.

ವಿಧಾನಸಭಾಧ್ಯಕ್ಷರ ಸ್ಥಾನಕ್ಕೆ ಟಿ.ಬಿ. ಜಯಚಂದ್ರ, ಎಚ್.ಕೆ. ಪಾಟೀಲ, ಬಸವರಾಜ ರಾಯರೆಡ್ಡಿ ಸೇರಿದಂತೆ ಕೆಲವರ ಹೆಸರು ಕೇಳಿಬರುತ್ತಿದೆ. ಆದರೆ, ಅವರೆಲ್ಲರೂ ಸಚಿವ ಸ್ಥಾನದ ಮೇಲೂ ಕಣ್ಣಿಟ್ಟಿದ್ದಾರೆ. ಹೀಗಾಗಿ, ಯಾರಾಗಲಿದ್ದಾರೆ ಸಭಾಧ್ಯಕ್ಷರು ಎಂಬ ಕುತೂಹಲ ಮೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT