ಬೆಂಗಳೂರು: ‘ಸಮಾಜದ ಅಂಚಿನಲ್ಲಿರುವ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಧೈರ್ಯದಿಂದ ಹೋರಾಡಿದ ಮತ್ತು ವಿಶೇಷವಾಗಿ ಹಿಂದುಳಿದ ವರ್ಗಗಳ ಪರ ನಿಂತಿರುವುದಕ್ಕಾಗಿ ‘ನ್ಯಾಯ ಯೋಧ’ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು’ ಸೇರಿದಂತೆ ಮೂರು ಪ್ರಮುಖ ನಿರ್ಣಯಗಳನ್ನು ‘ಬೆಂಗಳೂರು ಘೋಷಣೆ’ ಹೆಸರಿನಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ‘ಇತರ ಹಿಂದುಳಿದ ವರ್ಗಗಳ ಸಲಹಾ ಸಮಿತಿ’ ಸಭೆಯು ಸರ್ವಾನುಮತದಿಂದ ಅಂಗೀಕರಿಸಿದೆ.

ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಬುಧವಾರ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ನಾಯಕರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

‘ನಮ್ಮ ನಾಯಕ ರಾಹುಲ್ ಗಾಂಧಿ ಅವರ ದೃಢ ಸಂಕಲ್ಪವು ಮನುವಾದಿ ಮೋದಿ ಸರ್ಕಾರವನ್ನು ಭಾರತದಲ್ಲಿ ಜಾತಿ ಜನಗಣತಿಯ ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಗೆ ಶರಣಾಗುವಂತೆ ಮಾಡಿದೆ. ಈ ಐತಿಹಾಸಿಕ ಸಾಧನೆಗೆ ರಾಹುಲ್ ಗಾಂಧಿ ಅವರಿಗೆ ಭಾರತದ ಎಲ್ಲ ಹಿಂದುಳಿದ ವರ್ಗಗಳ ಪರವಾಗಿ ಸಮಿತಿಯು ಮೆಚ್ಚುಗೆ ಮತ್ತು ಕೃತಜ್ಞತೆ ವ್ಯಕ್ತಪಡಿಸಿದೆ’ ಎಂದು ಸಿದ್ದರಾಮಯ್ಯ ಹೇಳಿದರು.

‘ನಮ್ಮ ಸಂವಿಧಾನದಲ್ಲಿ ಕಲ್ಪಿಸಿರುವಂತೆ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಾತಿ ಜನಗಣತಿಯು ಒಂದು ಸಣ್ಣ ಹೆಜ್ಜೆ. ನಮ್ಮ ನ್ಯಾಯ ಯೋಧ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಸಮಾನತೆ ಮತ್ತು ಸಮಾನ ಸಮಾಜಕ್ಕೆ ಕಾರಣವಾಗುವ ಸಾಮಾಜಿಕ ಪರಿವರ್ತನೆಯ ಸಾಂವಿಧಾನಿಕ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ನಿರ್ಧರಿಸಲಾಗಿದೆ’ ಎಂದರು.

‘ನ್ಯಾಯ ಯೋಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಎಲ್ಲರಿಗೂ ನ್ಯಾಯ ಒದಗಿಸಲು ಹೋರಾಟ ಮುಂದುವರಿಸಲು ನಾವು ಸಂಕಲ್ಪ ಮಾಡಿದ್ದೇವೆ’ ಎಂದೂ ಹೇಳಿದರು.

‘ಪ್ರತಿಯೊಬ್ಬ ವ್ಯಕ್ತಿಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಅಂಶಗಳನ್ನು ಜನಗಣತಿಯು ಒಳಗೊಂಡಿರಬೇಕು. ಜೊತೆಗೆ, ಜಾತಿಗಳನ್ನು ಪ್ರಮುಖವಾಗಿ ಪರಿಗಣಿಸಬೇಕು. ತೆಲಂಗಾಣ ರಾಜ್ಯದಲ್ಲಿ ನಡೆದ ಜಾತಿ ಜನಗಣತಿಯನ್ನು ಇದಕ್ಕೆ ಮಾದರಿಯಾಗಿ ಇಟ್ಟುಕೊಳ್ಳಬೇಕು. ಮೀಸಲಾತಿ ಪ್ರಮಾಣ ಶೇ 50ರ ಮಿತಿಯನ್ನು ಮೀರಿ ಶಿಕ್ಷಣ, ಉದ್ಯೋಗ, ರಾಜಕೀಯ ಮತ್ತು ಇತರ ಕ್ಷೇತ್ರಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಸೂಕ್ತವಾದ ಮೀಸಲಾತಿ ಖಚಿತಪಡಿಸಿಕೊಳ್ಳಬೇಕು. ಸಂವಿಧಾನದ 15(5) ನೇ ವಿಧಿಯ ಪ್ರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ಸಿಗುವಂತಾಗಬೇಕು ಎಂದೂ ನಿರ್ಣಯ ಕೈಗೊಳ್ಳಲಾಯಿತು’ ಎಂದು ಅವರು ವಿವರಿಸಿದರು.

ಸಲಹಾ ಸಮಿತಿ ಸಂಚಾಲಕ ಅನಿಲ್ ಜೈ ಹಿಂದ್, ಎಂ. ವೀರಪ್ಪ ಮೊಯಿಲಿ, ಬಿ.ಕೆ. ಹರಿಪ್ರಸಾದ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.