ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ, ಮೋದಿಯನ್ನು ಎದುರಿಸಲು ರಾಹುಲ್‌ ಗಾಂಧಿ ಸೂಕ್ತ ವ್ಯಕ್ತಿ: ಸಿದ್ದರಾಮಯ್ಯ

Published 26 ಜೂನ್ 2024, 10:49 IST
Last Updated 26 ಜೂನ್ 2024, 10:49 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಮತ್ತು ನರೇಂದ್ರ ಮೋದಿ ಅವರನ್ನು ಎದುರಿಸಲು ರಾಹುಲ್‌ ಗಾಂಧಿ ಸೂಕ್ತ ವ್ಯಕ್ತಿ. ವಿರೋಧಪಕ್ಷದ ನಾಯಕನ ಸ್ಥಾನದ ಜವಾಬ್ದಾರಿಯನ್ನು ಅವರು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಹುಲ್‌ಗಾಂಧಿ ವಿರೋಧಪಕ್ಷದ ಸ್ಥಾನವನ್ನು ಸ್ವೀಕರಿಸಬೇಕು ಎಂದು ನಾನೂ ಕೂಡ ಸಲಹೆ ನೀಡಿದ್ದೆ ಎಂದರು.

‘ಬಿಜೆಪಿ ಮತ್ತು ಮೋದಿಯನ್ನು ಎದುರಿಸಲು ನೀವೇ ವಿರೋಧಪಕ್ಷದ ನಾಯಕರಾಗಬೇಕು ಎಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೇ. ಅವರು ಆ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ಸಂತಸವಾಗಿದೆ’ ಎಂದರು.

‘ನಾನು ನಾಳೆ(ಗುರುವಾರ) ದೆಹಲಿಗೆ ಹೋಗುತ್ತೇನೆ. ಅಲ್ಲಿ ರಾಜ್ಯದ ಸಂಸದರ ಸಭೆಯನ್ನು ಕರೆದು ರಾಜ್ಯದ ಹಿತ ಕಾಪಾಡುವ ಕುರಿತು ಚರ್ಚೆ ನಡೆಸಲಿದ್ದೇನೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT