ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS POLLS | ಮಂಡ್ಯ, ಕೋಲಾರ: ರಾಹುಲ್‌ ಗಾಂಧಿ ನಾಳೆ ಪ್ರಚಾರ

Published 16 ಏಪ್ರಿಲ್ 2024, 14:38 IST
Last Updated 16 ಏಪ್ರಿಲ್ 2024, 14:38 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಬುಧವಾರ (ಏಪ್ರಿಲ್‌ 17) ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಮಧ್ಯಾಹ್ನ 1.20ಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ರಾಹುಲ್‌, ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ತೆರಳಲಿದ್ದಾರೆ. ಅಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಂಡ್ಯದಿಂದ 3.10ಕ್ಕೆ ಕೋಲಾರಕ್ಕೆ ಹೊರಡಲಿರುವ ರಾಹುಲ್‌, ಅಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಕೋಲಾರದಿಂದ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. 

ಈ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘ಮಂಡ್ಯ ಹಾಗೂ ಕೋಲಾರಕ್ಕೆ ರಾಹುಲ್‌ ಗಾಂಧಿ ಬುಧವಾರ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲು ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದಾರೆ. ಪ್ರಚಾರಕ್ಕೆ ಬರುವಂತೆ ಬೇರೆ ರಾಜ್ಯಗಳಿಂದಲೂ ಅವರಿಗೆ ಒತ್ತಡವಿದೆ. ಅವರು ಕೊಟ್ಟಿರುವ ದಿನಾಂಕಗಳ ಸಮಯ ಹೊಂದಾಣಿಕೆ ಮಾಡುತ್ತಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT